alex Certify
ಕನ್ನಡ ದುನಿಯಾ       Mobile App
       

Kannada Duniya

ಶತಕ ಸಿಡಿಸಿ 6 ದಾಖಲೆ ಬರೆದ ವಿರಾಟ್ ಕೊಹ್ಲಿ

ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ ಕೊಹ್ಲಿ 6 ದಾಖಲೆಗಳನ್ನು ನಿರ್ಮಿಸಿದ್ದಾರೆ. ಕೊಹ್ಲಿ 83 ರನ್ ಗಳಿಸುತ್ತಿದ್ದಂತೆ ಒಂದು ದಾಖಲೆ ನಿರ್ಮಾಣವಾಯ್ತು. ಅಂತರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಅತಿ ಕಡಿಮೆ ಅವಧಿಯಲ್ಲಿ 9 ಸಾವಿರ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ.

ಕೊಹ್ಲಿ 202 ಪಂದ್ಯದ 194ನೇ ಇನ್ನಿಂಗ್ಸ್ ನಲ್ಲಿ 9000 ರನ್ ಗಳಿಸಿದ್ದಾರೆ. ಈ ಮೂಲಕ ದಕ್ಷಿಣ ಆಫ್ರಿಕಾ ಎಬಿ ಡಿವಿಲಿಯರ್ಸ್ ದಾಖಲೆ ಮುರಿದಿದ್ದಾರೆ. ಎಬಿ ಡಿವಿಲಿಯರ್ಸ್ 205 ಪಂದ್ಯಗಳಲ್ಲಿ 9 ಸಾವಿರ ರನ್ ಗಳಿಸಿದ್ದರು. ಕಡಿಮೆ ಅವಧಿಗೆ ಅತಿ ಹೆಚ್ಚು ರನ್ ಗಳಿಸಿದ ಭಾರತೀಯರ ಪಟ್ಟಿಯಲ್ಲಿ ಸೌರವ್ ಗಂಗೂಲಿ ಮೊದಲಿದ್ದರು. ಗಂಗೂಲಿ 228 ಪಂದ್ಯಗಳನ್ನಾಡಿ 9 ಸಾವಿರ ರನ್ ಗಳಿಸಿದ್ದರು.

ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಭಾರತದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಕೊಹ್ಲಿ ಒಟ್ಟೂ 32 ಶತಕ ಸಿಡಿಸಿದ್ದಾರೆ. ಮುಂಬೈನಲ್ಲಿ ನಡೆದ ಮೊದಲ ಪಂದ್ಯದಲ್ಲಿ 31ನೇ ಶತಕ ಸಿಡಿಸಿ ಕೊಹ್ಲಿ, ರಿಕಿ ಪಾಂಟಿಂಗ್ ದಾಖಲೆ ಸರಿಗಟ್ಟಿದ್ದರು.

ಇಷ್ಟೇ ಅಲ್ಲ ಒಂದು ವರ್ಷದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಪಟ್ಟಿಯಲ್ಲಿ ಕೊಹ್ಲಿ ಮುಂದಿದ್ದಾರೆ. 2007ರಲ್ಲಿ ಪಾಂಟಿಂಗ್ 1424 ರನ್ ಗಳಿಸಿದ್ದರು. ಕೊಹ್ಲಿ 2017ರಲ್ಲಿ 1460 ರನ್ ಗಳಿಸಿ ಪಾಂಟಿಂಗ್ ದಾಖಲೆ ಮುರಿದಿದ್ದಾರೆ. ಕೊಹ್ಲಿ ಹಾಗೂ ರೋಹಿತ್ ಶರ್ಮಾ ಎರಡನೇ ವಿಕೆಟ್ ಗೆ 230 ರನ್ ಗಳಿಸಿ ವಿಶ್ವ ದಾಖಲೆ ಬರೆದಿದ್ದಾರೆ. ಹಾಗೆ ಪಾರ್ಟನರ್ ಶಿಪ್ ನಲ್ಲಿ 200ಕ್ಕೂ ಹೆಚ್ಚು ರನ್ 11ನೇ ಬಾರಿ ಗಳಿಸಿ ಮತ್ತೊಂದು ದಾಖಲೆ ಬರೆದಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...