alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದು ನಿರ್ಮಾಣವಾಗುತ್ತಾ ವಿರಾಟ್ ಕೊಹ್ಲಿಯ ಮತ್ತೊಂದು ದಾಖಲೆ?

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗಾಗಲೇ ಹಲವು ದಾಖಲೆಗಳ ಸರದಾರರಾಗಿದ್ದಾರೆ. ಈಗ ಮತ್ತೊಂದು ದಾಖಲೆ ನಿರ್ಮಾಣ ಮಾಡುವ ಹೊಸ್ತಿಲಿನಲ್ಲಿದ್ದು, ಐರ್ಲೆಂಡ್ ವಿರುದ್ಧದ ಇಂದಿನ ಪಂದ್ಯದಲ್ಲಿ ಅದು ಸಾಧ್ಯವಾಗುತ್ತಾ ಎಂಬ ಕುತೂಹಲ ಮೂಡಿದೆ.

ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 17 ರನ್ ಗಳಿಸಿದರೆ ಟಿ20 ಕ್ರಿಕೆಟ್ ನಲ್ಲಿ ಅತಿ ವೇಗವಾಗಿ ಎರಡು ಸಾವಿರ ರನ್ ಗಳಿಸಿದ ಕೀರ್ತಿಗೆ ಪಾತ್ರರಾಗಲಿದ್ದಾರೆ. ಬುಧವಾರ ನಡೆದಿದ್ದ ಪಂದ್ಯದಲ್ಲಿ ಅವರು ಶೂನ್ಯಕ್ಕೆ ಔಟ್ ಆಗಿದ್ದ ಕಾರಣ ಇದು ಸಾಧ್ಯವಾಗಿರಲಿಲ್ಲ.

ಇದುವರೆಗೂ 58 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ 1983 ರನ್ ಗಳಿಸಿದ್ದಾರೆ. ನ್ಯೂಜಿಲ್ಯಾಂಡ್ ನ ಬ್ರೆಂಡನ್ ಮೆಕಲಮ್ 68 ಪಂದ್ಯಗಳ ಮೂಲಕ ಎರಡು ಸಾವಿರ ರನ್ ಗಳಿಸಿದ್ದು, ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 17 ರನ್ ಗಳಿಸಿದರೆ ಆ ಸಾಲಿಗೆ ಸೇರ್ಪಡೆಯಾಗಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...