alex Certify
ಕನ್ನಡ ದುನಿಯಾ       Mobile App
       

Kannada Duniya

ಏಕದಿನ ಸರಣಿಗೆ ತಂಡ ಪ್ರಕಟ: ಕೊಹ್ಲಿಗೆ ರೆಸ್ಟ್–ರೋಹಿತ್ ಕ್ಯಾಪ್ಟನ್

ಪ್ರವಾಸಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.

ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಯುವ ವೇಗಿ ಸಿದ್ಧಾರ್ಥ್ ಕೌಲ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಶ್ರೀಲಂಕಾ ವಿರುದ್ಧ 2 ನೇ ಟೆಸ್ಟ್ ಪಂದ್ಯವನ್ನು ಜಯಿಸಿರುವ ಟೀಂ ಇಂಡಿಯಾ ಇನ್ನು 1 ಟೆಸ್ಟ್ ಪಂದ್ಯವನ್ನಾಡಲಿದೆ.

ನಂತರ ಏಕದಿನ ಸರಣಿ ನಡೆಯಲಿದ್ದು, ನಿರಂತರ ಪಂದ್ಯಗಳ ಕಾರಣದಿಂದ ಏಕದಿನ ಸರಣಿಗೆ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ವಿಶ್ರಾಂತಿ ಪಡೆಯುವ ಕುರಿತು ಕೊಹ್ಲಿ ಮೊದಲೇ ತಿಳಿಸಿದ್ದರು. 3 ನೇ ಟೆಸ್ಟ್ ಪಂದ್ಯಕ್ಕೆ ಕೊಹ್ಲಿ ಲಭ್ಯವಿರುತ್ತಾರೆ ಎಂದು ಆಯ್ಕೆ ಸಮಿತಿಯ ಪ್ರಮುಖ ಎಂ.ಎಸ್.ಕೆ. ಪ್ರಸಾದ್ ತಿಳಿಸಿದ್ದಾರೆ.

ತಂಡ ಇಂತಿದೆ: ರೋಹಿತ್ ಶರ್ಮಾ(ಕ್ಯಾಪ್ಟನ್), ಶಿಖರ್ ಧವನ್, ಅಜಿಂಕ್ಯಾ ರೆಹಾನೆ, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಕೇದಾರ್ ಜಾಧವ್, ದಿನೇಶ್ ಕಾರ್ತಿಕ್, ಎಂ.ಎಸ್. ಧೋನಿ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಜಸ್ ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಸಿದ್ಧಾರ್ಥ್ ಕೌಲ್.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...