alex Certify
ಕನ್ನಡ ದುನಿಯಾ       Mobile App
       

Kannada Duniya

ಜಿಂಬಾಬ್ವೆ ಪ್ರವಾಸದಿಂದ ಹೊರಗುಳಿದ ವಿರಾಟ್ ಕೊಹ್ಲಿ

bcci tweetಮುಂಬರುವ ಜಿಂಬಾಬ್ವೆ ಪ್ರವಾಸಕ್ಕೆ ಟೀಮ್ ಇಂಡಿಯಾದ 16 ಮಂದಿ ಆಟಗಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮಹೇಂದ್ರ ಸಿಂಗ್ ಧೋನಿ ನಾಯಕತ್ವ ವಹಿಸಲಿದ್ದಾರೆ. ಭರ್ಜರಿ ಫಾರ್ಮ್ ನಲ್ಲಿರುವ ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

ಆಯ್ಕೆ ಸಮಿತಿ ಅಧ್ಯಕ್ಷ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಯುವ ಆಟಗಾರರಿಗೆ ಈ ಟೂರ್ನಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಶಿಖರ್ ಧವನ್ ಹಾಗೂ ಅಜಿಂಕ್ಯಾ ರಹಾನೆಗೂ ವಿಶ್ರಾಂತಿ ನೀಡಲಾಗಿದೆ.

ಜೂನ್ 11 ರಿಂದ ಜಿಂಬಾಬ್ವೆಯಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ ಆಟಗಾರರ ಪಟ್ಟಿ ಇಂತಿದೆ. ಮಹೇಂದ್ರ ಸಿಂಗ್ ಧೋನಿ (ನಾಯಕ), ಕೆ.ಎಲ್. ರಾಹುಲ್, ಫಯಾಜ್ ಫಜಲ್, ಮನೀಷ್ ಪಾಂಡೆ, ಕರುಣ್ ನಾಯರ್, ಅಂಬಟಿ ರಾಯುಡು, ರಿಶಿ ಧವನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಧವಲ್ ಕುಲಕರ್ಣಿ, ಜಸ್ಪ್ರೀತ್ ಭೂಮ್ರಾ, ಬರೀಂದರ್ ಸ್ರಾನ್, ಮನ್ದೀಪ್ ಸಿಂಗ್, ಕೇದಾರ್ ಜಾಧವ್, ಜಯದೇವ್ ಉಂಡ್ಕಟ್ ಹಾಗೂ ಯಜುವೇಂದರ್ ಚಹಲ್.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...