alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿನ್, ಸೆಹ್ವಾಗ್ ಹಿಂದಿಕ್ಕಿ ಟೆಸ್ಟ್ ನಲ್ಲಿ ದಾಖಲೆ ಬರೆದ ಕೊಹ್ಲಿ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಹಿಂದಿಕ್ಕಿದ್ದಾರೆ. ವಿಶ್ವದ ನಂಬರ್ ಒನ್ ಆಟಗಾರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ  6 ಸಾವಿರ ರನ್ ಕಲೆಹಾಕುವ ಮೂಲಕ ಸಾಧನೆ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧ ಸೌಥಾಂಪ್ಟನ್ ರೋಸ್ ಬಾಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಆರು ರನ್ ಕಲೆ ಹಾಕುವ  ಮೂಲಕ ಸಚಿನ್ ಹಿಂದಿಕ್ಕಿದ್ದಾರೆ.

ಕೊಹ್ಲಿ ತಮ್ಮ 119 ಇನ್ನಿಂಗ್ಸ್ ನಲ್ಲಿ 6 ಸಾವಿರ ರನ್ ಗಳಿಸಿದ್ದಾರೆ. ಅತ್ಯಂತ ಕಡಿಮೆ ಇನ್ನಿಂಗ್ಸ್ ನಲ್ಲಿ 6 ಸಾವಿರ ರನ್ ಗಳಿಸಿರುವ ಭಾರತದ ಆಟಗಾರರ ಪಟ್ಟಿಯಲ್ಲಿ ಮಾಜಿ ಆಟಗಾರ ಸುನೀಲ್ ಗವಾಸ್ಕರ್ ಮೊದಲ ಸ್ಥಾನದಲ್ಲಿದ್ದಾರೆ. ಅವ್ರು 117 ಇನ್ನಿಂಗ್ಸ್ ನಲ್ಲಿ 6 ಸಾವಿರ ಗಳಿಸಿದ್ದರು. ಈ ಪಟ್ಟಿಯಲ್ಲಿ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ ನಂತ್ರದ ಸ್ಥಾನದಲ್ಲಿ ಸಚಿನ್ ಇದ್ದು, ಸಚಿನ್ 120 ಇನ್ನಿಂಗ್ಸ್ ನಲ್ಲಿ 6 ಸಾವಿರ ರನ್ ಗಳಿಸಿದ್ದರು.

ವೀರೇಂದ್ರ ಸೆಹ್ವಾಗ್ ನಾಲ್ಕನೇ ಸ್ಥಾನದಲ್ಲಿದ್ರೆ ರಾಹುಲ್ ದ್ರಾವಿಡ್ ಐದನೇ ಸ್ಥಾನದಲ್ಲಿದ್ದಾರೆ. ಸೆಹ್ವಾಗ್ 121 ಇನ್ನಿಂಗ್ಸ್ ನಲ್ಲಿ ಹಾಗೂ ದ್ರಾವಿಡ್ 125 ಇನ್ನಿಂಗ್ಸ್ ನಲ್ಲಿ 6 ಸಾವಿರ ರನ್ ಗಳಿಸಿದ್ದಾರೆ. ಭಾರತದ 10 ಆಟಗಾರರು ಈವರೆಗೆ ಕ್ರಿಕೆಟ್ ವೃತ್ತಿ ಜೀವನದಲ್ಲಿ 6 ಸಾವಿರ ರನ್ ಗಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...