alex Certify
ಕನ್ನಡ ದುನಿಯಾ       Mobile App
       

Kannada Duniya

ಟೆಸ್ಟ್ ಕ್ರಿಕೆಟ್ ನಲ್ಲಿ ಕೊಹ್ಲಿ ಸಿಡಿಸಿದ ಶತಕಗಳೆಷ್ಟು…?

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ರಾಜಕೋಟ್ ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ್ದಾರೆ. ಇದು ವಿರಾಟ್ ಕೊಹ್ಲಿ ಅವರ 24 ನೇ ಶತಕವಾಗಿದೆ.

ಮೊದಲ ದಿನದಾಟದಲ್ಲಿ 72 ರನ್ ಕಲೆ ಹಾಕಿದ್ದ ವಿರಾಟ್ ಕೊಹ್ಲಿ, ಇಂದು ಶತಕ ಗಳಿಸುವ ಮೂಲಕ ಅತಿ ವೇಗವಾಗಿ 24 ನೇ ಟೆಸ್ಟ್ ಶತಕ ದಾಖಲಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

66 ಇನ್ನಿಂಗ್ಸ್ ಗಳಲ್ಲಿ 24 ಶತಕ ಗಳಿಸುವ ಮೂಲಕ ಆಸ್ಟ್ರೇಲಿಯಾದ ಕ್ರಿಕೆಟ್ ದಂತಕತೆ ಡೊನಾಲ್ಡ್ ಬ್ರಾಡ್ಮನ್ ಮೊದಲ ಸ್ಥಾನದಲ್ಲಿದ್ದಾರೆ. ಇಂದಿನ ಶತಕದ ಮೂಲಕ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದಿದ್ದು, 24 ಸೆಂಚುರಿ ಸಿಡಿಸಲು ಸಚಿನ್ 125 ಇನ್ನಿಂಗ್ಸ್ ತೆಗೆದುಕೊಂಡಿದ್ದರು. ಆದರೆ ಕೊಹ್ಲಿ ತಮ್ಮ 123 ನೇ ಇನ್ನಿಂಗ್ಸ್ ನಲ್ಲಿ ಈ ಸಾಧನೆ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...