alex Certify
ಕನ್ನಡ ದುನಿಯಾ       Mobile App
       

Kannada Duniya

ಹೇಗಿದೆ ಗೊತ್ತಾ ವಿರಾಟ್ ಕೊಹ್ಲಿಯ ಹೊಸ ಮನೆ…?

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಮುಂಬೈ ನಿವಾಸದ ಝಲಕ್ ಒಂದನ್ನು ಅಭಿಮಾನಿಗಳ ಮುಂದೆ ಪ್ರದರ್ಶಿಸಿದ್ದಾರೆ. ಮುಂಬೈನ ಗಗನಚುಂಬಿ ಕಟ್ಟಡಗಳ ಹಿನ್ನೆಲೆ ಇರುವ ಸೆಲ್ಫಿ ಒಂದನ್ನು ಪೋಸ್ಟ್ ಮಾಡಿದ್ದಾರೆ.

ಮನೆಯಲ್ಲೇ ಕುಳಿತು ಅದ್ಭುತ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದು, ಅದಕ್ಕಾಗಿ ಬೇರೆಡೆಗೆ ಹೋಗಬೇಕಾಗಿಲ್ಲ ಅಂತಾ ಬರೆದುಕೊಂಡಿದ್ದಾರೆ. ಕಳೆದ ಡಿಸೆಂಬರ್ 11ರಂದು ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾರನ್ನು ಮದುವೆಯಾಗಿದ್ದರು.

ಮದುವೆ ನಂತರ ವಿರುಷ್ಕಾ ಜೋಡಿ ಮುಂಬೈನಲ್ಲಿ ಹೊಸ ಮನೆ ಖರೀದಿಸಿದ್ದಾರೆ. ಕೊಹ್ಲಿ ಕೂಡ ಅಲ್ಲಿಗೇ ಶಿಫ್ಟ್ ಆಗಿದ್ದಾರೆ. ಇತ್ತೀಚೆಗಷ್ಟೆ ಮುಕ್ತಾಯವಾದ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕೊಹ್ಲಿ, ಸದ್ಯ ವಿಶ್ರಾಂತಿಯಲ್ಲಿದ್ದಾರೆ.

ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯಲ್ಲಿ ಕೊಹ್ಲಿ ಆಡುತ್ತಿಲ್ಲ. ಕ್ರಿಕೆಟ್ ನಿಂದ ಬ್ರೇಕ್ ಸಿಕ್ಕಿರೋದ್ರಿಂದ ಆರಾಮಾಗಿ ಕಾಲ ಕಳೆಯುತ್ತಿದ್ದಾರೆ. ಬಿಡುವಿನ ಸಮಯವನ್ನು ಸದುಪಯೋಗಪಡಿಸಿಕೊಳ್ತಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...