alex Certify
ಕನ್ನಡ ದುನಿಯಾ       Mobile App
       

Kannada Duniya

ವಿರಾಟ್ ಕೊಹ್ಲಿ ಬಗ್ಗೆ ರವಿಶಾಸ್ತ್ರಿ ಹೇಳಿದ್ದೇನು?

ravi ss

ಮುಂಬೈ: ಭಾರತ ಕ್ರಿಕೆಟ್ ತಂಡದ ಸ್ಪೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ ಮಿಂಚುತ್ತಿರುವುದು ನಿಮಗೇ ಗೊತ್ತೇ ಇದೆ. ಕೊಹ್ಲಿ ಟೀಂ ಇಂಡಿಯಾ ಕ್ರಿಕೆಟ್ ತಂಡಕ್ಕೆ ನಾಯಕರಾಗಲಿ ಎಂದು ಮಾಜಿ ಆಟಗಾರ ರವಿಶಾಸ್ತ್ರಿ ಹೇಳಿದ್ದಾರೆ.

ಏಕದಿನ, ಟಿ-20 ಹಾಗೂ ಟೆಸ್ಟ್ ತಂಡದ ನಾಯಕರಾಗಿ ಜವಾಬ್ದಾರಿ ವಹಿಸಿಕೊಳ್ಳಲು ವಿರಾಟ್ ಕೊಹ್ಲಿ ಸಮರ್ಥರಾಗಿದ್ದು, ಅವರು ನಾಯಕತ್ವ ವಹಿಸಿಕೊಳ್ಳಬೇಕೆಂದು ಭಾರತ ಕ್ರಿಕೆಟ್ ತಂಡದ ಮಾಜಿ ನಿರ್ದೇಶಕರೂ ಆಗಿರುವ ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ. ಟೆಸ್ಟ್ ಕ್ರಿಕೆಟ್ ನಾಯಕರಾಗಿದ್ದ ಮಹೇಂದ್ರ ಸಿಂಗ್ ಧೋನಿ ವಿದಾಯ ಹೇಳಿದ ನಂತರ, ವಿರಾಟ್ ಕೊಹ್ಲಿ ಟೆಸ್ಟ್ ತಂಡಕ್ಕೆ ನಾಯಕರಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

ವಿರಾಟ್ ಕೊಹ್ಲಿ ಅವರನ್ನು ಕ್ರಿಕೆಟ್ ನ ಮೂರೂ ರೀತಿಯ ಪಂದ್ಯಗಳಿಗೆ ನಾಯಕರಾಗಿ ಮಾಡಿದಲ್ಲಿ ಮುಂದೆ ಹೆಚ್ಚಿನ ಯಶಸ್ಸು ಗಳಿಸಬಹುದೆಂದು ಹೇಳಿರುವ ರವಿಶಾಸ್ತ್ರಿ, ತಾವು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥನಾಗಿದ್ದರೆ ಕೊಹ್ಲಿಗೆ ನಾಯಕತ್ವ ಜವಾಬ್ದಾರಿ ವಹಿಸುತ್ತಿದ್ದೆ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...