alex Certify
ಕನ್ನಡ ದುನಿಯಾ       Mobile App
       

Kannada Duniya

30ನೇ ಶತಕ ಸಿಡಿಸಿ ರಿಕಿ ಪಾಂಟಿಂಗ್ ಸಮನಾಗಿ ನಿಂತ ಕೊಹ್ಲಿ

ಶ್ರೀಲಂಕಾ ವಿರುದ್ಧ ಭಾನುವಾರ ನಡೆದ ಐದನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ತಮ್ಮ ಏಕದಿನ ಪಂದ್ಯದ ವೃತ್ತಿ ಜೀವನದಲ್ಲಿ 30ನೇ ಶತಕ ಸಿಡಿಸಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ಮಾಜಿ ಆಟಗಾರ ರಿಕಿ ಪಾಂಟಿಂಗ್ ಸರಿಸಮನಾಗಿ ನಿಂತಿದ್ದಾರೆ.

30ನೇ ಶತಕ ಸಿಡಿಸುವ ಮೂಲಕ ಕೊಹ್ಲಿ ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ರಿಕಿ ಪಾಂಟಿಂಗ್ ಜೊತೆ ಎರಡನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಮೊದಲ ಸ್ಥಾನದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿದೆ.

ಶ್ರೀಲಂಕಾ ವಿರುದ್ಧ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಮಾಜಿ ಆಟಗಾರ ಸನತ್ ಜಯಸೂರ್ಯ ದಾಖಲೆಯನ್ನು ಮುರಿದಿದ್ದರು. ಐದನೇ ಏಕದಿನ ಪಂದ್ಯದಲ್ಲಿ ಇನ್ನೊಂದು ಶತಕ ಸಿಡಿಸುವ ಮೂಲಕ ಮತ್ತೊಂದು ದಾಖಲೆ ಬರೆದಿದ್ದಾರೆ.

ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ಶತಕ ಗಳಿಸಿದವರ ಪಟ್ಟಿ :

ಸಚಿನ್ ತೆಂಡೂಲ್ಕರ್ 49 ಶತಕ

ವಿರಾಟ್ ಕೊಹ್ಲಿ-ರಿಕಿ ಪಾಂಟಿಂಗ್ -30 ಶತಕ

ಸನತ್ ಜಯಸೂರ್ಯ -29 ಶತಕ

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...