alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳಾ ಕ್ರಿಕೆಟ್ ತಂಡದ ಕೋಚ್ ಹುದ್ದೆ ರೇಸ್ ನಲ್ಲಿ ಕೊಹ್ಲಿ ಗುರು

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯವರ ಬಾಲ್ಯದ ಕ್ರಿಕೆಟ್ ಗುರು, ರಾಜ್ ಕುಮಾರ್ ಶರ್ಮಾ ಭಾರತ ಮಹಿಳಾ ತಂಡದ ಕೋಚ್ ಹುದ್ದೆಯ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ.

ಭಾರತ ಮಹಿಳಾ ಕ್ರಿಕೆಟ್ ತಂಡದ ಕೋಚ್ ತುಷಾರ್ ಅರೋತೆರಿಂದ ತೆರವಾದ ಸ್ಥಾನಕ್ಕೆ ಅಭ್ಯರ್ಥಿಗಳ ಹುಡುಕಾಟ ನಡೆದಿದೆ. 20 ಆಕಾಂಕ್ಷಿಗಳ ಪಟ್ಟಿಯಲ್ಲಿ ಆರು ಜನರ ಶಾರ್ಟ್ ಲಿಸ್ಟ್ ಮಾಡಲಾಗಿದೆ. ಶುಕ್ರವಾರ ಆಕಾಂಕ್ಷಿಗಳ ಸಂದರ್ಶನ ನಡೆದಿರುವುದಾಗಿ ತಿಳಿದು ಬಂದಿದೆ. ಶಾರ್ಟ್ ಲಿಸ್ಟ್ ನಲ್ಲಿ ಇಬ್ಬರು ಕನ್ನಡಿಗರು ಸ್ಥಾನ ಪಡೆದಿದ್ದಾರೆ. ಟೀಂ ಇಂಡಿಯಾದಲ್ಲಿ ಆಡಿ ಮಿಂಚಿರುವ ಸುನಿಲ್ ಜೋಶಿ ಹಾಗೂ ಕೋಚ್ ಸನತ್ ಕುಮಾರ್ ಶಾರ್ಟ್ ಲಿಸ್ಟ್ ನಲ್ಲಿ ಸ್ಥಾನ ಪಡೆದ ಕನ್ನಡಿಗರು.

ರಾಜ್ ಕುಮಾರ್ ಶರ್ಮಾ, ದೆಹಲಿ ಕಿರಿಯರ ತಂಡದ ಕೋಚ್ ಆಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ರಾಜಕುಮಾರ್ ಭಾರತ ವನಿತೆಯರ ಕೋಚ್ ಹಾಗೂ ದೆಹಲಿ ರಣಜಿ ತಂಡದ ಕೋಚ್ ಸ್ಥಾನದ ಆಕಾಂಕ್ಷಿ. ಇದೇ ಸೆಪ್ಟೆಂಬರ್ ನಲ್ಲಿ ಭಾರತ ಮಹಿಳಾ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, ನೂತನ ಕೋಚ್ ಗೆ ಮೊದಲ ಸವಾಲು ಎದುರಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...