alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಹ್ಲಿ ಅಭಿಮಾನಿಗಳಿಗೊಂದು ಕಹಿ ಸುದ್ದಿ !

virat 10

ಲಾಹೋರ್: ಭಾರತ ಕ್ರಿಕೆಟ್ ತಂಡದ ತಾರೆ ವಿರಾಟ್ ಕೊಹ್ಲಿ ಆಟಕ್ಕೆ ಮನಸೋಲದವರಿಲ್ಲ. ಕೊಹ್ಲಿಗೆ ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿಯೂ ಅಭಿಮಾನಿಗಳಿದ್ದಾರೆ. ಹೀಗೆ ವಿದೇಶದಲ್ಲಿರುವ ಅಭಿಮಾನಿಯೊಬ್ಬ ಸಂಕಷ್ಟಕ್ಕೆ ಸಿಲುಕಿದ್ದಾನೆ.

ಪಾಕಿಸ್ತಾನದ ಲಾಹೋರ್ ನಿಂದ ಸುಮಾರು 200 ಕಿಲೋ ಮೀಟರ್ ದೂರದ ಗ್ರಾಮವೊಂದರಲ್ಲಿ ವಾಸವಾಗಿರುವ ಉಮರ್ ಡ್ರಾಜ್ ಅವರಿಗೆ ವಿರಾಟ್ ಕೊಹ್ಲಿ ಎಂದರೆ ಸಖತ್ ಇಷ್ಟ. ಇದಕ್ಕಾಗಿಯೇ ಅವರು ಜೈಲು ಸೇರುವಂತಾಗಿದೆ. ಇತ್ತೀಚೆಗೆ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆದ ಕ್ರಿಕೆಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಆಟದಿಂದ ಭಾರತ ತಂಡ ಗೆಲುವು ಸಾಧಿಸಿತ್ತು. ಕೊಹ್ಲಿ ಅಭಿಮಾನಿಯಾಗಿದ್ದ ಉಮರ್ ತನ್ನ ಮನೆಯ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸಿ, ಸಂಭ್ರಮಿಸಿದ್ದ.

ಈ ಬಗ್ಗೆ ಪ್ರಕರಣ ದಾಖಲಾಗಿ ಉಮರ್ ಜೈಲಿನಲ್ಲಿದ್ದಾನೆ. ಪಂಜಾಬ್ ಪ್ರಾಂತ್ಯದ ಒಕಾರಾ ಜಿಲ್ಲೆಯ ನ್ಯಾಯಾಲಯಕ್ಕೆ ಉಮರ್ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಆತನಿಗೆ ಜಾಮೀನು ನೀಡಲು ನಿರಾಕರಿಸಿದೆ. ಮತ್ತೊಂದು ಅಚ್ಚರಿಯ ಸಂಗತಿ ಎಂದರೆ ಪೊಲೀಸರು ನೀಡಿರುವ ವರದಿಯಲ್ಲಿ ಉಮರ್ ತ್ರಿವರ್ಣ ಧ್ವಜ ಹಾರಿಸಿರುವ ಬಗ್ಗೆ ಯಾವುದೇ ಸಾಕ್ಷ್ಯವಿಲ್ಲ ಎಂದು ತಿಳಿಸಿದ್ದಾರೆ. ಒಂದು ವೇಳೆ ಉಮರ್ ಮೇಲಿನ ಆರೋಪ ಸಾಬೀತಾದಲ್ಲಿ ಅವರಿಗೆ 10 ವರ್ಷ ಶಿಕ್ಷೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...