alex Certify
ಕನ್ನಡ ದುನಿಯಾ       Mobile App
       

Kannada Duniya

ದಕ್ಷಿಣ ಆಫ್ರಿಕಾ ಪ್ರವಾಸದ ಬಗ್ಗೆ ಸೆಹ್ವಾಗ್ ಭವಿಷ್ಯ

ಭಾರತ ಕ್ರಿಕೆಟ್ ಟೀಂನ ಮಾಜಿ ಆರಂಭಿಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್, ಭಾರತ ತಂಡದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾದಲ್ಲಿ ಯಾವ ಆಟಗಾರ ಅತಿ ಹೆಚ್ಚು ರನ್ ಗಳಿಸಲಿದ್ದಾನೆಂದು ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.

ಫೇಸ್ಬುಕ್ ಲೈವ್ ಗೆ ಬಂದಿದ್ದ ಸೆಹ್ವಾಗ್ ಅನೇಕ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಈ ವೇಳೆ ಯಾವ ಬ್ಯಾಟ್ಸ್ ಮನ್ ದಕ್ಷಿಣ ಆಫ್ರಿಕಾದಲ್ಲಿ ಹೆಚ್ಚು ರನ್ ಗಳಿಸಬಹುದೆಂದು ಪ್ರಶ್ನೆ ಕೇಳಲಾಗಿದೆ. ಇದಕ್ಕೆ ಉತ್ತರಿಸಿದ ಸೆಹ್ವಾಗ್, ರೋಹಿತ್ ಶರ್ಮಾ ಹೆಸರು ಹೇಳಿದ್ದಾರೆ. ನನ್ನ ಪ್ರಕಾರ ದಕ್ಷಿಣ ಆಫ್ರಿಕಾದಲ್ಲಿ ರೋಹಿತ್ ಶರ್ಮಾ ಹಾಗೂ ಕೊಹ್ಲಿ ಆಟ ನೋಡಬಹುದು. ಅಲ್ಲಿ ಬ್ಯಾಟಿಂಗ್ ಮಾಡೋದು ಖುಷಿ ನೀಡುತ್ತದೆ. ರೋಹಿತ್ ಆರನೇ ಆಟಗಾರನಾಗಿ ಕಣಕ್ಕಿಳಿದಲ್ಲಿ ಉತ್ತಮ ಬ್ಯಾಟಿಂಗ್ ನಿರೀಕ್ಷೆ ಮಾಡಬಹುದು ಎಂದಿದ್ದಾರೆ ಸೆಹ್ವಾಗ್.

ಜನವರಿ 5 ರಿಂದ ಕೇಪ್ ಟೌನ್ ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಶ್ರೀಲಂಕಾ ವಿರುದ್ಧ ರೋಹಿತ್ ಉತ್ತಮ ಪ್ರದರ್ಶನ ತೋರಿದ್ದಾರೆ. ಹಾಗಾಗಿ ಟೀಂನ 11 ಸದಸ್ಯರಲ್ಲಿ ರೋಹಿತ್ ಗೆ ಸ್ಥಾನ ಸಿಗುವ ಸಾಧ್ಯತೆಯಿದೆ. ಒಂದು ವೇಳೆ ರೋಹಿತ್ ಟೀಂನಲ್ಲಿ ಕಾಣಿಸಿಕೊಂಡ್ರೆ ನಾಲ್ಕನೇ ಬ್ಯಾಟ್ಸ್ ಮನ್ ಆಗಿ ಕಣಕ್ಕಿಳಿಯಲಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ತಂಡದ ಆಯ್ಕೆ ತಲೆನೋವಿನ ವಿಷ್ಯವಾಗಿದೆ ಎಂದು ಮೂಲಗಳು ಹೇಳ್ತಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...