alex Certify
ಕನ್ನಡ ದುನಿಯಾ       Mobile App
       

Kannada Duniya

ಇನ್ನೂ ತಣಿದಿಲ್ಲ ಪಾಕ್ ಅಭಿಮಾನಿಗಳ ಆಕ್ರೋಶ

tv pak

ಐಸಿಸಿ ವಿಶ್ವಕಪ್ ಕ್ರಿಕೆಟ್ ಟಿ-20 ಪಂದ್ಯಾವಳಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ, ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಮಾರ್ಚ್ 19ರಂದು ಕೋಲ್ಕತಾದಲ್ಲಿ ಹೈ ವೋಲ್ಟೇಜ್ ಪಂದ್ಯ ನಡೆಯಿತು. ಪಂದ್ಯದಲ್ಲಿ ಭಾರತ ಜಯಗಳಿಸಿತು. ಆ ಮೂಲಕ ವಿಶ್ವಕಪ್ ನಲ್ಲಿ ತನ್ನ ಗೆಲುವಿನ ಅಭಿಯಾನ ಮುಂದುವರೆಸಿತು.

ಕ್ರಿಕೆಟ್ ಜಗತ್ತಿನ ಸಾಂಪ್ರದಾಯಿಕ ಎದುರಾಳಿ ತಂಡದ ವಿರುದ್ಧ ಪಾಕಿಸ್ತಾನ ಸೋತಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪಾಕಿಸ್ತಾನದಲ್ಲಿ ಕ್ರಿಕೆಟ್ ಅಭಿಮಾನಿಗಳು ತಂಡ ಸೋಲುತ್ತಿದ್ದಂತೆ ಟಿವಿಗಳ ಮೇಲೆ ಆಕ್ರೋಶ ತೋರಿದ್ದಾರೆ. ಟಿವಿಗಳನ್ನು ರಸ್ತೆಗೆ ತಂದು ಪೀಸ್ ಪೀಸ್ ಮಾಡುವ ಮೂಲಕ, ಸೋಲಿನ ಸಿಟ್ಟನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕ್ರಿಕೆಟ್ ಬ್ಯಾಟ್ ಗಳಿಗೆ ಬೆಂಕಿ ಹಚ್ಚಿದ್ದಾರೆ. ಪಾಕಿಸ್ತಾನ ತಂಡದ ಆಟಗಾರರ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳಪೆ ಆಟವಾಡಿದ್ದರಿಂದಲೇ ಸೋಲಬೇಕಾಯಿತು ಎಂದೆಲ್ಲಾ ಹೇಳಿದ್ದಾರೆ.

ಭಾರತದ ವಿರುದ್ಧ ಪಾಕ್ ತಂಡ ಸೋತ ಕೂಡಲೇ ಮನೆಯಲ್ಲಿದ್ದ ಟಿವಿಗಳ ಮೇಲೆ ಆಕ್ರೋಶ ತೀರಿಸಿಕೊಂಡಿದ್ದಾರೆ. ಜೊತೆಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು, ಆಟಗಾರರ ವಿರುದ್ಧ ಘೋಷಣೆ ಕೂಗಿದ್ದಾರೆ. ಅಲ್ಲದೇ, ಪಾಕ್ ಹಿರಿಯ ಕ್ರಿಕೆಟಿಗರು ಕೂಡ, ತಂಡದ ಆಟಗಾರರು ಉತ್ತಮ ಪ್ರದರ್ಶನ ತೋರಿಲ್ಲ ಎಂದು ದೂರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...