alex Certify
ಕನ್ನಡ ದುನಿಯಾ       Mobile App
       

Kannada Duniya

ಜಿಂಬಾಬ್ವೆ ಪ್ರವಾಸಕ್ಕೆ ಯುವಿಯನ್ನು ಕೈ ಬಿಟ್ಟಿದ್ದೇಕೆ..?

yuvraj-singh-44573ಜಿಂಬಾಬ್ವೆ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡವನ್ನು ಇಂದು ಆಯ್ಕೆ ಮಾಡಲಾಗಿದೆ. 16 ಮಂದಿಯ ತಂಡವನ್ನು ನಾಯಕ ಮಹೇಂದ್ರ ಸಿಂಗ್ ಧೋನಿ ಮುನ್ನಡೆಸಲಿದ್ದಾರೆ. ವಿರಾಟ್ ಕೊಹ್ಲಿ, ಶಿಖರ್ ಧವನ್ ಹಾಗೂ ಅಜಿಂಕ್ಯಾ ರಹಾನೆಯವರನ್ನು ಕೈ ಬಿಟ್ಟು ಯುವ ಆಟಗಾರರಿಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.

ಆದರೆ ವಿಶ್ವ ಕಪ್ ನಲ್ಲಿ ಗೆಲ್ಲಲು ನೆರವಾಗಿದ್ದ ಯುವರಾಜ್ ಸಿಂಗ್ ಮತ್ತು ಹರ್ಭಜನ್ ಸಿಂಗ್ ಅವರನ್ನು ಈ ತಂಡದಿಂದ ಕೈ ಬಿಟ್ಟಿರುವುದು ಕ್ರಿಕೆಟ್ ಪ್ರೇಮಿಗಳನ್ನು ಅಚ್ಚರಿಗೊಳಿಸಿದೆ. ಗಾಯಾಳುವಾಗಿ ಐಪಿಎಲ್ ನ ಕೆಲ ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದ ಯುವರಾಜ್ ಸಿಂಗ್ ಕಳಪೆ ಪ್ರದರ್ಶನವನ್ನೇನೂ ನೀಡುತ್ತಿಲ್ಲ.

ಆದರೂ ಜಿಂಬಾಬ್ವೆ ಪ್ರವಾಸಕ್ಕೆ ಅವರನ್ನು ಕೈ ಬಿಡಲಾಗಿದೆ. ಈ ಕುರಿತು ಮಾಧ್ಯಮದವರು ಆಯ್ಕೆ ಸಮಿತಿ ಅಧ್ಯಕ್ಷ ಸಂದೀಪ್ ಪಾಟೀಲ್ ಅವರನ್ನು ಪ್ರಶ್ನಿಸಿದ ವೇಳೆ, ಯುವ ಆಟಗಾರರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದಿದ್ದಾರೆ. ಆದರೆ ನಾಯಕ ಮಹೇಂದ್ರ ಸಿಂಗ್ ಧೋನಿಯವರ ಒತ್ತಡಕ್ಕೆ ಮಣಿದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...