alex Certify
ಕನ್ನಡ ದುನಿಯಾ       Mobile App
       

Kannada Duniya

ಐಪಿಎಲ್ ಹಬ್ಬಕ್ಕೆ ಕ್ಷಣಗಣನೆ: ಯಾವ ಚಾನೆಲ್ ನಲ್ಲಿ ಪ್ರಸಾರವಾಗಲಿದೆ ಲೈವ್

ipl-schedule-m

ಇಂದಿನಿಂದ ಐಪಿಎಲ್ ಹಬ್ಬ ಶುರುವಾಗಲಿದೆ. ಐಪಿಎಲ್-10ನೇ ಆವೃತ್ತಿಗೆ ಕ್ಷಣಗಣನೆ ಶುರುವಾಗಿದೆ. ಹೈದ್ರಾಬಾದ್ ನಲ್ಲಿ ಸಂಜೆ 6.30 ರಿಂದ 8 ಗಂಟೆಯವರೆಗೆ ಐಪಿಎಲ್ ಉದ್ಘಾಟನಾ ಸಮಾರಂಭ ನಡೆಯಲಿದೆ. ಬಾಲಿವುಡ್ ಹಾಗೂ ಕ್ರಿಕೆಟ್ ದಿಗ್ಗಜರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದ ಬಳಿಕ ರಾತ್ರಿ 8 ಗಂಟೆಗೆ ಐಪಿಎಲ್ 10ನೇ ಆವೃತ್ತಿಯ ಮೊದಲ ಪಂದ್ಯ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ಮೊದಲ ಪಂದ್ಯವನ್ನಾಡಲಿದೆ. ತವರಿನಲ್ಲಿ ಮೊದಲ ಪಂದ್ಯ ಆಡಲಿರುವ ಹೈದ್ರಾಬಾದ್ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಲ್ಲಿದೆ. ಬೆಂಗಳೂರಿಗೆ ಗಾಯಾಳುಗಳ ಸಮಸ್ಯೆ ಎದುರಾಗಿದೆ. ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ ಹಾಗೂ ಎಬಿ ಡಿ ವಿಲ್ಲಿಯರ್ಸ್ ಗಾಯಗೊಂಡಿದ್ದು, ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ.

ಐಪಿಎಲ್ ಅಭಿಮಾನಿಗಳು ಉದ್ಘಾಟನಾ ಕಾರ್ಯಕ್ರಮವನ್ನು ಸೆಟ್ ಮ್ಯಾಕ್ಸ್, ಸೋನಿ ಸಿಕ್ಸ್, ಸೋನಿ ಸಿಕ್ಸ್ ಹೆಚ್ ಡಿ, ಸೋನಿ ಇಎಸ್ಪಿಎನ್ ಮತ್ತು ಸೋನಿ ಇಎಸ್ಪಿಎನ್ ಹೆಚ್ ಡಿಯಲ್ಲಿ ನೋಡಬಹುದಾಗಿದೆ. ಏಪ್ರಿಲ್ 5 ರಿಂದ ಮೇ 21ರವರೆಗೆ ಐಪಿಎಲ್ ಪಂದ್ಯಗಳು ನಡೆಯಲಿವೆ.

ಮುಂಬೈ, ಪುಣೆ, ದೆಹಲಿ, ಹೈದ್ರಾಬಾದ್, ಇಂದೋರ್, ಕೊಲ್ಕತ್ತಾ, ರಾಜ್ಕೋಟ್ ಹಾಗೂ ಮೊಹಾಲಿಯಲ್ಲಿ ಪಂದ್ಯಗಳು ನಡೆಯಲಿವೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...