alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳಾ ಕ್ರಿಕೆಟ್ ಉತ್ತೇಜನಕ್ಕೆ ಬಿ.ಸಿ.ಸಿ.ಐ. ಒತ್ತು

ನವದೆಹಲಿ: ದೇಶೀಯವಾಗಿ ಮಹಿಳಾ ಕ್ರಿಕೆಟ್ ಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿ.ಸಿ.ಸಿ.ಐ.) ಕ್ರಮ ಕೈಗೊಂಡಿದೆ.

ದೇಶದಲ್ಲಿ ಹೆಚ್ಚು ಟೂರ್ನಿಗಳನ್ನು ಆಯೋಜಿಸುವ ಉದ್ದೇಶ ಹೊಂದಿದ್ದು, ಆಗಸ್ಟ್ 30 ರಂದು ಆಡಳಿತಾಧಿಕಾರಿಗಳ ಸಮಿತಿಯ ಮಹಿಳಾ ವಿಭಾಗದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು.

ಮಹಿಳಾ ಕ್ರಿಕೆಟ್ ಗೆ ದೇಶದಲ್ಲಿ ಹೆಚ್ಚು ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ‘ಎ’ ತಂಡಗಳ ಪಂದ್ಯಗಳನ್ನು ಹೆಚ್ಚಾಗಿ ಆಯೋಜಿಸಲು ಬಿ.ಸಿ.ಸಿ.ಐ. ಚಿಂತನೆ ನಡೆಸಿದೆ.

ಮಹಿಳಾ ತಂಡ ವಿಶ್ವಕಪ್ ಕ್ರಿಕೆಟ್ ನಲ್ಲಿ ಅಮೋಘ ಪ್ರದರ್ಶನ ನೀಡಿದೆ. ದೇಶೀಯ ಟೂರ್ನಿಗಳನ್ನು ಹೆಚ್ಚಾಗಿ ಆಯೋಜಿಸಿದಲ್ಲಿ ಇನ್ನಷ್ಟು ಅನುಕೂಲವಾಗಲಿದೆ. ಈ ಹಿನ್ನಲೆಯಲ್ಲಿ ಅಂತರವಲಯ ಟೂರ್ನಿಗಳನ್ನು ರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸುವ ಸಾಧ್ಯತೆ ಇದೆ.

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್, ಬೌಲರ್ ಜೂಲನ್ ಗೋಸ್ವಾಮಿ, ಡಯಾನಾ ಎಡುಲ್ಜಿ ಮಹಿಳಾ ಸಮಿತಿಯಲ್ಲಿದ್ದು, ಪಂದ್ಯ ಅಭಿವೃದ್ಧಿ ವಿಭಾಗದ ಪ್ರಧಾನ ವ್ಯವಸ್ಥಾಪಕ ರತ್ನಾಕರ ಶೆಟ್ಟಿ ಸಮಿತಿಯ ಸಂಚಾಲಕರಾಗಿದ್ದಾರೆ. ನಾಳಿನ ಸಭೆಯಲ್ಲಿ ಇವರು ತೀರ್ಮಾನ ಕೈಗೊಳ್ಳಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...