alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ

hqdefault

ಶಿವಮೊಗ್ಗದ ಮಾರಿಕಾಂಬ ಜಾತ್ರೆ ಅಂಗವಾಗಿ ಮಾ.4 ರಿಂದ 6 ರವರೆಗೆ ನೆಹರೂ ಕ್ರೀಡಾಂಗಣದಲ್ಲಿ ಪ್ರತಿದಿನ ಮಧ್ಯಾಹ್ನ 3 ಗಂಟೆಗೆ ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿದೆ.

ಮಹಾರಾಷ್ಟ್ರದ ಕೊಲ್ಲಾಪುರ ಸೇರಿದಂತೆ ಹೊರ ರಾಜ್ಯಗಳಿಂದ ಪ್ರಸಿದ್ದ ಪೈಲ್ವಾನರು ಭಾಗವಹಿಸಲಿದ್ದು, ಅವರಿಗೆ ವಸತಿ, ಊಟದ ವ್ಯವಸ್ಥೆ ಮಾಡಲಾಗಿದೆ. ಅಖಾಡದ ಕೊನೆ ದಿನ ಕುಸ್ತಿ ಗೆದ್ದ ಪೈಲ್ವಾನರಿಗೆ ಬೆಳ್ಳಿ ಗದೆ ಮತ್ತು 10 ಸಾವಿರ ರೂ.ನಗದು ಬಹುಮಾನವಿರುತ್ತದೆ. ಕುಸ್ತಿಗೆ 5 ಲಕ್ಷ ರೂ ವೆಚ್ಛ ಮಾಡಲಾಗುತ್ತಿದೆ.

ಕುಸ್ತಿ ಪಂದ್ಯಾವಳಿಯನ್ನು ಮಾ.4 ರ ಮಧ್ಯಾಹ್ನ 3 ಗಂಟೆಗೆ ಪೂರ್ವ ವಲಯ ಡಿಐಜಿ ನಂಜುಂಡಸ್ವಾಮಿ ಉದ್ಘಾಟಿಸುವರು, ಮಾ.5 ರಂದು ಜಿಲ್ಲಾಧಿಕಾರಿ ವಿ.ಪಿ.ಇಕ್ಕೇರಿ ಪಂದ್ಯಾವಳಿ ಉದ್ಘಾಟಿಸುವರು. ಜಿಲ್ಲಾ ರಕ್ಷಣಾಧಿಕಾರಿ ರವಿ ಡಿ. ಚನ್ನಣ್ಣನವರ್ ಬಹುಮಾನ ವಿತರಿಸುವರು. ಮಾ.6 ರಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಉದ್ಘಾಟನೆ ನೆರವೇರಿಸಲಿದ್ದು, ಶಾಸಕರಾದ ಕೆ.ಬಿ. ಪ್ರಸನ್ನಕುಮಾರ್, ಶಾರದಾ ಪೂರ್ಯಾನಾಯ್ಕ, ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ಮೊದಲಾದವರು ಭಾಗವಹಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...