alex Certify
ಕನ್ನಡ ದುನಿಯಾ       Mobile App
       

Kannada Duniya

ಶಸ್ತ್ರಚಿಕಿತ್ಸೆಗೆ ಒಳಗಾದ ಟೀಮ್ ಇಂಡಿಯಾ ವಿಕೆಟ್ ಕೀಪರ್

ಒಂದು ಕಡೆ ಟೀಮ್ ಇಂಡಿಯಾ, ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ಅಂಗಳದಲ್ಲಿ ಟೆಸ್ಟ್ ಪಂದ್ಯ ಆಡ್ತಾ ಇದ್ದರೆ, ಇನ್ನೊಂದು ಕಡೆ ಟೀಮ್ ಇಂಡಿಯಾದ ವಿಕೆಟ್ ಕೀಪರ್ ವೃದ್ಧಿಮನ್ ಸಹಾ ಮ್ಯಾಂಚೆಸ್ಟರ್ ನಲ್ಲಿ ಭುಜದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.

ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಸಹಾ, ಬೆಂಗಳೂರಿನಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಹಾಗೂ ಇಂಗ್ಲೆಂಡ್ ಪ್ರವಾಸದಿಂದ ವಂಚಿತರಾಗಿದ್ದಾರೆ. ಐಪಿಎಲ್ ವೇಳೆ ಹೆಬ್ಬೆರಳಿಗೆ ಗಾಯವಾಗಿದ್ದು, ಸಹಾರನ್ನು ಬೆಂಬಿಡದೆ ಕಾಡಿದೆ.

ಮ್ಯಾಂಚೆಸ್ಟರ್ ನಲ್ಲಿ ಸಹಾರ ಭುಜದ ಶಸ್ತ್ರಚಿಕಿತ್ಸೆ, ಬಿಸಿಸಿಐ ಮುತುವರ್ಜಿಯಲ್ಲಿ ನಡೆದಿದೆ. ಈ ಬಗ್ಗೆ ಬಿಸಿಸಿಐ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ವೃದ್ಧಿಮನ್ ಸಹಾ ಬೇಗನೆ ಗುಣಮುಖರಾಗಲಿ ಎಂದು ವಿಶ್ ಮಾಡಿದೆ.

ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಟೆಸ್ಟ್ ಗೆ ನಿವೃತ್ತಿ ಘೋಷಿಸಿದ ಬಳಿಕ, ಈ ಸ್ಥಾನದಲ್ಲಿ ಸಹಾ ಕಣಕ್ಕೆ ಇಳಿಯುತ್ತಿದ್ದಾರೆ. ಅಲ್ಲದೆ ತಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಸಹಾ ಮುಂಬರುವ ಆಸ್ಟ್ರೇಲಿಯಾ ಪ್ರವಾಸವನ್ನು ಸಹ ಮಿಸ್ ಮಾಡಿಕೊಳ್ಳುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...