alex Certify
ಕನ್ನಡ ದುನಿಯಾ       Mobile App
       

Kannada Duniya

“ಸಚಿನ್ ಗಿಂತ ಮುಂದೆ ಹೋಗ್ತಾರೆ ಕೊಹ್ಲಿ’’

Pakistan's Younis Khan leaves the field as the play is called off due to rain on day two of the first Test match between West Indies and Pakistan at the Sabina Park in Kingston, Jamaica, on April 22, 2017. / AFP PHOTO / Jewel SAMAD (Photo credit should read JEWEL SAMAD/AFP/Getty Images)

ಟೆಸ್ಟ್ ಕ್ರಿಕೆಟ್ ನಲ್ಲಿ 10 ಸಾವಿರ ರನ್ ಪೂರೈಸಿರುವ ಪಾಕಿಸ್ತಾನದ ಮೊದಲ ಕ್ರಿಕೆಟರ್ ಯೂನಿಸ್ ಖಾನ್ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕೊಹ್ಲಿ ಮುಂದಿನ ದಿನಗಳಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ರನ್ನು ಮೀರಿಸಲಿದ್ದಾರೆಂದು ಯೂನಿಸ್ ಖಾನ್ ಹೇಳಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದ ಮೂರನೇ ದಿನ 50 ರನ್ ಗಳಿಸುವ ಮೂಲಕ ಯೂನಿಸ್ ಖಾನ್ ಟೆಸ್ಟ್ ವೃತ್ತಿ ಜೀವನದಲ್ಲಿ 10 ಸಾವಿರ ರನ್ ಪೂರೈಸಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ 13ನೇ ಆಟಗಾರ ಯೂನಿಸ್ ಖಾನ್.

10 ಸಾವಿರ ರನ್ ಗಳಿಸುವ ಮೊದಲು ಮನಸ್ಸನ್ನು ಸಜ್ಜುಗೊಳಿಸಿಕೊಳ್ಳಬೇಕು. ಸಚಿನ್ ತೆಂಡೂಲ್ಕರ್ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ ನಂತ್ರ ವಿರಾಟ್ ಕೊಹ್ಲಿಯನ್ನು ನೀವು ಉದಾಹರಣೆಯಾಗಿ ತೆಗೆದುಕೊಳ್ಳಬಹುದು. ಕೊಹ್ಲಿ ಗುರಿಯೊಂದಿಗೆ ಮುಂದೆ ಸಾಗುತ್ತಿದ್ದಾರೆ. ಮುಂದಿನ ವರ್ಷಗಳಲ್ಲಿ ಕೊಹ್ಲಿ ಸಚಿನ್ ಗಿಂತ ಮುಂದೆ ಹೋಗ್ತಾರೆಂಬ ನಂಬಿಕೆ ಇದೆ ಎಂದು ಯೂನಿಸ್ ಖಾನ್ ಹೇಳಿದ್ದಾರೆ.

2000ನೇ ಇಸವಿಯಲ್ಲಿ ಯೂನಿಸ್ ಖಾನ್ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. 17 ವರ್ಷಗಳ ಕ್ರಿಕೆಟ್ ಜೀವನದಲ್ಲಿ 39 ವರ್ಷದ ಯೂನಿಸ್ 10 ಸಾವಿರ ರನ್ ಗಳಿಸಿ ಸಾಧನೆ ಮಾಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...