alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿನ್ ದಾಖಲೆ ಸರಿಗಟ್ಟಲಿದ್ದಾರೆ ಯುವಿ

sachin-yuvraj

ಜೂನ್ 1ರಿಂದ ಇಂಗ್ಲೆಂಡ್ ನಲ್ಲಿ ಚಾಂಪಿಯನ್ಸ್ ಟ್ರೋಫಿ ಶುರುವಾಗ್ತಾ ಇದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಸೆಣೆಸಾಟ ನಡೆಸಲಿದೆ. ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ಯುವರಾಜ್ ಸಿಂಗ್ ಮೈದಾನಕ್ಕಿಳಿಯಲಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಅತಿಹೆಚ್ಚು ಪಂದ್ಯಗಳನ್ನಾಡಿರುವ ಯುವಿ ಮೇಲೆ ಭರವಸೆ ಜಾಸ್ತಿ ಇದೆ.

2000ರಲ್ಲಿ ಮೊದಲ ಬಾರಿ ಚಾಂಪಿಯನ್ಸ್ ಟ್ರೋಫಿ ಮೂಲಕ ವೃತ್ತಿ ಆರಂಭಿಸಿದ್ದ ಯುವರಾಜ್ ಈವರೆಗೆ ನಾಲ್ಕು ಚಾಂಪಿಯನ್ಸ್ ಟ್ರೋಫಿಯಲ್ಲಿ ಆಟವಾಡಿದ್ದಾರೆ. 2017 ಜೂನ್ ನಾಲ್ಕರಂದು ಪಾಕಿಸ್ತಾನದ ವಿರುದ್ಧ ನಡೆಯುವ ಪಂದ್ಯದಲ್ಲಿ ಮೈದಾನಕ್ಕಿಳಿದ್ರೆ ಸಚಿನ್ ತೆಂಡೂಲ್ಕರ್ ರಷ್ಟೇ ಚಾಂಪಿಯನ್ಸ್ ಟ್ರೋಫಿ ಆಡಿದ ಹೆಗ್ಗಳಿಕೆಗೆ ಯುವಿ ಪಾತ್ರರಾಗಲಿದ್ದಾರೆ.

ಸಚಿನ್ ತೆಂಡೂಲ್ಕರ್ 1998, 2000, 2002, 2006 ಮತ್ತು 2009ರಲ್ಲಿ ಚಾಂಪಿಯನ್ಸ್ ಟ್ರೋಫಿ ಆಡಿದ್ದರು. ಯುವರಾಜ್ ಸಿಂಗ್ 2000, 2002, 2004ರಲ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಮೈದಾನಕ್ಕಿಳಿದಿದ್ದಾರೆ. 2000ರಲ್ಲಿ ಕೀನ್ಯಾ ವಿರುದ್ಧ ನಡೆದ ಪಂದ್ಯದಲ್ಲಿ ಯುವಿಗೆ ಬ್ಯಾಟ್ ಹಿಡಿಯುವ ಅವಕಾಶ ಸಿಗಲಿಲ್ಲ. ಆದ್ರೆ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ 80 ಎಸೆತಕ್ಕೆ 12 ಬೌಂಡರಿ ಬಾರಿಸಿ 84 ರನ್ ಗಳಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಬಾರಿ ಯುವಿ ಆಟ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...