alex Certify
ಕನ್ನಡ ದುನಿಯಾ       Mobile App
       

Kannada Duniya

ಯುವರಾಜ್ ಸಿಂಗ್ ಅಭಿಮಾನಿಗಳಿಗೊಂದು ಸಿಹಿ ಸುದ್ದಿ

Yuvi- 22

ಮುಂಬೈ: ಮಹಾರಾಷ್ಟ್ರದಲ್ಲಿ ತೀವ್ರ ಬರಗಾಲದಿಂದ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾದ ಹಿನ್ನೆಲೆಯಲ್ಲಿ, ಐಪಿಎಲ್ ಪಂದ್ಯಗಳನ್ನು ಸ್ಥಳಾಂತರ ಮಾಡಬೇಕೆಂದು ಹೈಕೋರ್ಟ್ ಸೂಚನೆ ನೀಡಿದ್ದು, ಅದರಂತೆ ಪಂದ್ಯಗಳನ್ನು ಸ್ಥಳಾಂತರ ಮಾಡಲಾಗಿದೆ.

ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ, ಭಾರತ ಕ್ರಿಕೆಟ್ ತಂಡದ ಸ್ಪೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್, ಐಪಿಎಲ್ ಪಂದ್ಯಗಳ ಸ್ಥಳಾಂತರ ಸರಿಯಲ್ಲ ಎಂದು ಹೇಳಿಕೆ ನೀಡಿದ್ದಾರೆ. ಕ್ರಿಕೆಟ್ ನಿಂದಾಗಿ ದೇಶಕ್ಕೆ ಸಮಸ್ಯೆಯಾಗಿದೆ ಎಂದು ನನಗೆ ಅನಿಸಿಲ್ಲ. ಅಲ್ಲದೇ, ಬರಗಾಲ ಮತ್ತು ನೀರಿನ ಸಮಸ್ಯೆಗಳಿಗೆ ಐಪಿಎಲ್ ಪಂದ್ಯಗಳು ಕಾರಣವಲ್ಲ, ಸಮಸ್ಯೆಗೆ ಅವುಗಳನ್ನು ಗುರಿಯಾಗಿಸುವುದು ಕೂಡ ಸರಿಯಲ್ಲ ಎಂದಿರುವ ಯುವರಾಜ್ ಸಿಂಗ್, ನೀರಿನ ತೊಂದರೆಯಿಂದ ಐಪಿಎಲ್ ಪಂದ್ಯಗಳನ್ನು ಸ್ಥಳಾಂತರಿಸಿದ್ದು, ಸರಿಯಲ್ಲ ಎಂದು ಹೇಳಿದ್ದಾರೆ.

ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸುತ್ತಿರುವ ಯುವರಾಜ್ ಸಿಂಗ್ ಐಸಿಸಿ ವಿಶ್ವಕಪ್ ಟಿ-20 ಕ್ರಿಕೆಟ್ ಪಂದ್ಯಾವಳಿ ಸಂದರ್ಭದಲ್ಲಿ ಗಾಯಗೊಂಡಿದ್ದರು. ಇದೀಗ ಚೇತರಿಸಿಕೊಂಡಿರುವ ಅವರು ಮೇ 6ರಂದು ನಡೆಯುವ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...