alex Certify
ಕನ್ನಡ ದುನಿಯಾ       Mobile App
       

Kannada Duniya

ಯುವಿ ಅಭಿಮಾನಿಗಳಿಗೊಂದು ಕಹಿ ಸುದ್ದಿ

yuvaraj singh

ಮುಂಬೈ: ಭಾರತ ಕ್ರಿಕೆಟ್ ತಂಡದ ಸ್ಪೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ತಂಡದಿಂದ ಹೊರಕ್ಕೆ ನಡೆದಿದ್ದಾರೆ. ಕಳೆದ ಭಾನುವಾರ ಮೊಹಾಲಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಟಿ-20 ಪಂದ್ಯದಲ್ಲಿ ಯುವರಾಜ್ ಸಿಂಗ್ ಕಾಲಿಗೆ ಗಾಯವಾಗಿದ್ದು, ವೈದ್ಯರು ಎರಡು ವಾರ ವಿಶ್ರಾಂತಿ ತೆಗೆದುಕೊಳ್ಳಲು ಸಲಹೆ ನೀಡಿದ್ದಾರೆ.

ಹಾಗಾಗಿ, ಯುವರಾಜ್ ಸಿಂಗ್ ತಂಡದಿಂದ ಹೊರಗೆ ಉಳಿದಿದ್ದಾರೆ. ಕಳೆದ ವಿಶ್ವಕಪ್ ಸಂದರ್ಭದಲ್ಲಿ ಯುವರಾಜ್ ಸಿಂಗ್ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಬಳಿಕ ಅವರು ತಂಡಕ್ಕೆ ಕಂ ಬ್ಯಾಕ್ ಆಗಿದ್ದರು. ಐಸಿಸಿ ವಿಶ್ವಕಪ್ ಟಿ-20 ಪಂದ್ಯಾವಳಿಯಲ್ಲಿ ಯುವರಾಜ್ ಸಿಂಗ್ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಟೀಂ ಇಂಡಿಯಾ ನಾಯಕ ಧೋನಿ ಅವಕಾಶ ನೀಡುತ್ತಿಲ್ಲ ಎಂದು ಯುವರಾಜ್ ತಂದೆ ಯೋಗರಾಜ್ ಸಿಂಗ್ ಆರೋಪ ಮಾಡಿದ್ದರು. ಇದೀಗ ಯುವರಾಜ್ ಕಾಲಿನ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗೆ ಉಳಿಯುವಂತಾಗಿದೆ.

ಯುವರಾಜ್ ಸಿಂಗ್ ಬದಲಿಗೆ ಕನ್ನಡಿಗ ಮನೀಶ್ ಪಾಂಡೆಗೆ ತಂಡದಲ್ಲಿ ಸ್ಥಾನ ಸಿಕ್ಕಿದೆ. 26 ವರ್ಷದ ಮನೀಶ್ ಪಾಂಡೆ ಟಿ-20ಯಲ್ಲಿ ಸೆಂಚುರಿ ಬಾರಿಸಿದ ಭಾರತದ ಮೊದಲ ಬ್ಯಾಟ್ಸ್ ಮನ್ ಆಗಿದ್ದಾರೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಟಿ-20 ವಿಶ್ವಕಪ್ 2ನೇ ಸೆಮಿಫೈನಲ್ ಪಂದ್ಯದಲ್ಲಿ ಅವರು ಕಣಕ್ಕಿಳಿಯಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...