alex Certify
ಕನ್ನಡ ದುನಿಯಾ       Mobile App
       

Kannada Duniya

ವಾವ್ ! ಸರ್ವ ಋತುವಿನಲ್ಲೂ ಜೋಗ ವೈಭವ ಕಣ್ತುಂಬಿಕೊಳ್ಳಿ

joga falls a

ವಿಶ್ವ ವಿಖ್ಯಾತ ಜೋಗ ಜಲಪಾತದ ಸೌಂದರ್ಯಕ್ಕೆ ಮಾರು ಹೋಗದವರಿಲ್ಲ. ಪ್ರವಾಸಿಗರಿಗೆ ಮಳೆಗಾಲದಲ್ಲಿ ಮಾತ್ರ ಕಾಣ ಸಿಗುತ್ತಿದ್ದ ಜೋಗದ ಸಿರಿಯನ್ನು, ಇನ್ನು ಮುಂದೆ ವರ್ಷವಿಡೀ ಕಣ್ತುಂಬಿಕೊಳ್ಳುವ ಅವಕಾಶ ಸಿಗಲಿದೆ.

ವಿಶ್ವವಿಖ್ಯಾತ ಜೋಗ ಜಲಪಾತವನ್ನು ಸರ್ವಋತು ಜಲಪಾತವಾಗಿ ಅಭಿವೃದ್ಧಿಪಡಿಸುವ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ದಕ್ಷಿಣ ಕನ್ನಡ ಮೂಲದ ದುಬೈ ಉದ್ಯಮಿ ಬಿ.ಆರ್. ಶೆಟ್ಟಿ ಅವರ ಒಡೆತನದ ಎಂ.ಎನ್.ಸಿ. ಗ್ರೂಪ್ ಕಂಪನಿ 450 ಕೋಟಿ ರೂಪಾಯಿ ವೆಚ್ಛದಲ್ಲಿ ವರ್ಷದ ಎಲ್ಲಾ ದಿನಗಳಲ್ಲಿಯೂ ಜೋಗ ಜಲಪಾತ ವೈಭವ ಇರುವಂತೆ ಯೋಜನೆಯನ್ನು ರೂಪಿಸಿದೆ.

ಈ ಸಂಸ್ಥೆಗೆ ಷರತ್ತುಬದ್ಧ ಅನುಮತಿಯನ್ನು ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಲಪಾತಗಳಿಂದ ಬೀಳುವ ನೀರನ್ನು ಮರುಬಳಕೆ ಮಾಡುವ ಮೂಲಕ, ವರ್ಷ ಪೂರ್ತಿ ಜಲಪಾತದ ಸೌಂದರ್ಯ ಕಾಣುವಂತೆ ಮಾಡಲಾಗುವುದು ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...