alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರಪತಿ ಭವನ ವೀಕ್ಷಣೆಗೆ ಸಾರ್ವಜನಿಕರಿಗೂ ಅವಕಾಶ

ದೆಹಲಿಯ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ವಾರದಲ್ಲಿ ನಾಲ್ಕು ದಿನ, ಅಂದ್ರೆ ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರ ರಾಷ್ಟ್ರಪತಿ ಭವನಕ್ಕೆ ಜನಸಾಮಾನ್ಯರು ಕೂಡ ವಿಸಿಟ್ ಮಾಡಬಹುದು.

ಈ ಬಗ್ಗೆ ನವೆಂಬರ್ 22ರಂದು ರಾಷ್ಟ್ರಪತಿ ಭವನದಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಆದ್ರೆ ಇದಕ್ಕಾಗಿ ನೀವು ಆನ್ ಲೈನ್ ಬುಕ್ಕಿಂಗ್ ಮಾಡಬೇಕು.

rashtrapatisachivalaya.gov.in/rbtour ವೆಬ್ ಸೈಟ್ ನಲ್ಲಿ ಬುಕ್ಕಿಂಗ್ ಮಾಡಬಹುದು.  ಆನ್ ಲೈನ್ ಬುಕ್ಕಿಂಗ್ ಇಲ್ಲದೇ ಪ್ರವೇಶಕ್ಕೆ ಅನುಮತಿ ನೀಡಲಾಗುವುದಿಲ್ಲ. ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡುವ ಪ್ರತಿ ವ್ಯಕ್ತಿಗೆ 50 ರೂಪಾಯಿ ಶುಲ್ಕ ವಿಧಿಸಲಾಗುತ್ತದೆ. 8 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಉಚಿತ ಪ್ರವೇಶವಿದೆ.

ಭಾರತೀಯರು ಫೋಟೋ ಸಹಿತ ಅಧಿಕೃತ ಗುರುತಿನ ಚೀಟಿಯ ಮೂಲ ಪ್ರತಿಯನ್ನು ಕೊಂಡೊಯ್ಯಬೇಕು. ವಿದೇಶಿಯರು ತಮ್ಮ ಪಾಸ್ಪೋರ್ಟ್ ತರುವುದು ಕಡ್ಡಾಯ. ಗೇಟ್ ನಂಬರ್ 2, 37 ಮತ್ತು 30ರಲ್ಲಿ ಪ್ರವೇಶ ಮತ್ತು ನಿರ್ಗಮನಕ್ಕೆ ಅವಕಾಶ ನೀಡಲಾಗುತ್ತದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...