alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿರುವ ಜೋಗ ಜಲಪಾತ

Sharavati-River-Jog-Falls-Jog-Fallsಮುಂಗಾರು ಮಳೆ ಆರಂಭಗೊಂಡಿದ್ದು, ಮಲೆನಾಡಿನಲ್ಲೂ ಮಳೆಯ ಸಿಂಚನವಾಗಿದೆ. ಮಲೆನಾಡಿನ ಮಳೆಗಾಲದ ಸೊಬಗು ನೋಡುಗರ ಕಣ್ಮನ ಸೆಳೆಯುತ್ತಿದೆ.

ಶಿವಮೊಗ್ಗ ಜಿಲ್ಲೆಯ ವಿಶ್ವ ವಿಖ್ಯಾತ ಜೋಗ ಜಲಪಾತದ ರಾಜ, ರಾಣಿ, ರೋರರ್, ರಾಕೆಟ್ ಧುಮ್ಮಿಕ್ಕಲಾರಂಭಿಸಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಮಾನವನಾಗಿ ಹುಟ್ಟಿದ ಮೇಲೆ ಒಮ್ಮೆ ನೋಡು ಜೋಗದ ಗುಂಡಿ ಎನ್ನುವಂತೆ ವಿಶ್ವ ವಿಖ್ಯಾತ ಜೋಗ ಜಲಪಾತದ ಸೌಂದರ್ಯ ಸವಿಯಲು ಇದು ಸಕಾಲ.

ಮೈದುಂಬಿ ಧುಮ್ಮಿಕ್ಕಿ ಹರಿಯುತ್ತಿರುವ ಜಲಪಾತ ಬಿಟ್ಟು, ಬಿಟ್ಟು ಮರೆಯಾಗುವ ಮಳೆಯ ನಡುವೆ ಮಂಜಿನ ಹಿನ್ನಲೆಯಲ್ಲಿ ಸುಂದರವಾಗಿ ಕಂಗೊಳಿಸುತ್ತಿದೆ. ಜೋಗದಲ್ಲಿ ಈಗ ಪ್ರವಾಸಿಗರಿಗಾಗಿ ಹಲವು ಅನುಕೂಲತೆಗಳನ್ನು ಮಾಡಲಾಗಿದ್ದು, ಪ್ರವಾಸವನ್ನು ಮತ್ತಷ್ಟು ಮುದಗೊಳಿಸುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...