ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ಅರ್ಹತಾ ಪರೀಕ್ಷೆಯನ್ನು ಏಪ್ರಿಲ್ 21 ರಂದು ನಡೆಸಲಾಗುವುದು.
ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ ತಮ್ಮ ಪರೀಕ್ಷಾ ಪತ್ರ ಪಡೆದುಕೊಳ್ಳಬಹುದಾಗಿದೆ. ಎಲ್ಲಾ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇಲಾಖೆಯ http://sts.karnataka.gov.inGPSTRNHK ವೆಬ್ಸೈಟ್ ನಲ್ಲಿ ಅರ್ಜಿ ಸಂಖ್ಯೆ, ಜನ್ಮ ದಿನಾಂಕ ಭರ್ತಿ ಮಾಡಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಲಾಗಿದೆ.

