HomeKarnatakaʼಅಗ್ನಿವೀರ್‌ ವಾಯು' ಹುದ್ದೆಗೆ ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

ʼಅಗ್ನಿವೀರ್‌ ವಾಯು’ ಹುದ್ದೆಗೆ ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

ಭಾರತೀಯ ವಾಯುಪಡೆಯ ಅಗ್ನಿಪಥ್‌ ಯೋಜನೆಯಡಿಯಲ್ಲಿ ಅಗ್ನಿವೀರ್‌ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಭಾರತೀಯ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ನೊಂದಾಯಿಸಲು ಅಧಿಸೂಚನೆ ಹೊರಡಿಸಿದೆ.

ಅರ್ಜಿ ಸಲ್ಲಿಸಲು ದ್ವಿತೀಯ ಪಿ.ಯು.ಸಿ. ಯಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೊಮಾ ವಿಭಾಗದ (ಮೆಕ್ಯಾನಿಕಲ್‌, ಎಲೆಕ್ಟ್ರಿಕಲ್‌, ಎಲೆಕ್ಟ್ರಾನಿಕ್ಸ್‌, ಆಟೋಮೊಬೈಲ್‌, ಕಂಪ್ಯೂಟರ್‌ ಸೈನ್ಸ್‌, ಇನ್‌ಸ್ಟ್ರುಮೆಂಟ್‌ ಟೆಕ್ನಾಲಜಿ, ಇನ್‌ಫಾರ್ಮೇಷನ್‌ ಟೆಕ್ನಾಲಜಿಯಲ್ಲಿ) ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ವಯಸ್ಸು ( 26-12-2002 ರಿಂದ 26-06-2006) 17.5 ರಿಂದ 21 ವರ್ಷಗಳನ್ನು ಒಳಗೊಂಡಿರುವ ಅವಿವಾಹಿತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರಗಳಿಗೆ ಹಾಗೂ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗಾಗಿ https://agnipathvayu.cdac.in ಜಾಲತಾಣಕ್ಕೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಮಾ.31 ಕೊನೆಯ ದಿನವಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular