ʼಭಯೋತ್ಪಾದನೆʼ ಕುರಿತ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಚಿವ ಕೋಟ ಶ್ರೀನಿವಾಸ್‌ ಪೂಜಾರಿ

ಬೈಂದೂರು ಬಿಜೆಪಿ ಮಂಡಲದ ವತಿಯಿಂದ ಏಪ್ರಿಲ್ 16 ರ ಭಾನುವಾರದಂದು ಹೆಮ್ಮಾಡಿ ಜಯಶ್ರೀ ಸಭಾಭವನದಲ್ಲಿ ನಡೆದ ವಾರ್ಡ್ ವಾರಿಯರ್ಸ್ ಸಮಾವೇಶದ ಭಾಷಣಕ್ಕೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವಿಟ್ಟರ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿಕೆಯನ್ನು ಖಂಡಿಸಿ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ್ದ ಕೆ. ಗೋಪಾಲ್ ಪೂಜಾರಿ, ನನ್ನ 28 ವರ್ಷದ ಸಾಮಾಜಿಕ ಮತ್ತು ರಾಜಕೀಯ ಜೀವನದಲ್ಲಿ ನನ್ನ ಯಾವ ಕೃತ್ಯಗಳು ಭಯೋತ್ಪಾದನೆಗೆ ಸಂಬಂಧಿಸಿವೆ ಎಂದು ಕೋಟ ಶ್ರೀನಿವಾಸ್ ಪೂಜಾರಿಯವರನ್ನು ಕೇಳಿದ್ದರು.

ಕೆ. ಗೋಪಾಲ್ ಪೂಜಾರಿ ಅವರು ಟ್ವಿಟ್ಟರ್ ನಲ್ಲಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶ್ರೀನಿವಾಸ ಪೂಜಾರಿ, ನಾನು ವೈಯಕ್ತಿಕವಾಗಿ ನಿಮ್ಮ ವಿರುದ್ಧ ಯಾವುದೇ ಆರೋಪ ಮಾಡಿಲ್ಲ, ಹಾಗೆ ಮಾಡುವುದಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದ್ದೆ. ಈಗಲೂ ಕಾಂಗ್ರೆಸ್ ಬಗ್ಗೆ ನನ್ನ ಮಾತಿಗೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

ಏಪ್ರಿಲ್ 16 ರಂದು ನಡೆದ ವಾರ್ಡ್ ವಾರಿಯರ್ಸ್ ಸಭೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು ಈ ಬಾರಿ ಚುನಾವಣೆ ಗೋಪಾಲ ಪೂಜಾರಿ ಮತ್ತು ಗುರುರಾಜ್ ಗಂಟಿಹೊಳೆ ಅವರ ನಡುವಿನ ಸ್ಪರ್ಧೆ ಅಲ್ಲ. ಇದು ಭಯೋತ್ಪಾದಕರು ಮತ್ತು ರಾಷ್ಟ್ರ ಭಕ್ತರ ನಡುವಿನ ಚುನಾವಣೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿದ್ದರು. ಇದು ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು.

https://twitter.com/kgopalpoojari/status/1647645676162129922?cxt=HHwWhIDRtenAzt0tAAAA

https://twitter.com/KotasBJP/status/1647902602305376257

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read