ʼಹನುಮಾನ್‌ ಚಾಲೀಸಾʼ ಪಠಿಸಲು ಮುಂದಾದವರಿಗೆ ಮಹಾರಾಷ್ಟ್ರ ಡಿಸಿಎಂ ಕಛೇರಿ ಮುಂದೆ ತಡೆ

ತಮ್ಮ ಬೇಡಿಕೆ ಈಡೇರಿಸುವಂತೆ ಮಹಾರಾಷ್ಟ್ರ ಉಪ‌ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಒತ್ತಾಯಿಸಿ ‘ಹನುಮಾನ್ ಚಾಲೀಸಾ’ ಪಠಣ ಮಾಡಲು ಅವರ ಕಚೇರಿಗೆ ತೆರಳುತ್ತಿದ್ದಾಗ ನಾಗ್ಪುರ ಪೊಲೀಸರು ಮಹಿಳಾ ಸ್ವ-ಸಹಾಯ ಗುಂಪುಗಳ (ಎಸ್‌ಎಚ್‌ಜಿ) ಸದಸ್ಯರನ್ನು ತಡೆದಿದ್ದಾರೆ.

ನೆರೆಯ ವಾರ್ಧಾದ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಫಡ್ನವಿಸ್ ಅವರ ತವರು ನಾಗ್ಪುರ ನಗರದಲ್ಲಿ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರು ರಾಜ್ಯ ಸರ್ಕಾರವು ತಡೆಹಿಡಿದಿರುವ ಗೌರವಧನ ಬಿಡುಗಡೆಗೆ ಒತ್ತಾಯಿಸಿದ್ದಾರೆ.

ಮಹಿಳಾ ಸ್ವ ಸಹಾಯ ಗುಂಪುಗಳ ಸದಸ್ಯರು ಭಾನುವಾರ ಪ್ರತಿಭಟನೆಗೆ ಕರೆ ನೀಡಿದ ನಂತರ ನಗರ ಪೊಲೀಸರು ನಾಗ್ಪುರ ನೈರುತ್ಯ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಮತ್ತು ವಾರ್ಧಾ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಫಡ್ನವಿಸ್ ಅವರ ಕಚೇರಿಯಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read