
ಇದಕ್ಕೆ ಪುಷ್ಟಿ ನೀಡುವಂತೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ತಮಗೆ ನೀಡಲಾಗಿದ್ದ ಮೊಬೈಲ್ ಗಳು ಕಳಪೆ ಗುಣಮಟ್ಟದಿಂದ ಕೂಡಿರುವ ಕಾರಣ ಅಂಕಿ ಅಂಶಗಳನ್ನು ದಾಖಲು ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕೆ ಅವುಗಳನ್ನು ಹಿಂದಿರುಗಿಸಲು ನಿರ್ಧರಿಸಿದ್ದಾರೆ.
ಈ ಕುರಿತಂತೆ ಭಾನುವಾರದಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘಟನೆ ಅಧ್ಯಕ್ಷೆ ತ್ರಿವೇಣಿ ಕೆಪ್ಪಿಗೆ, ಮೊಬೈಲ್ ಕಳಪೆ ಗುಣಮಟ್ಟದಿಂದ ಕೂಡಿರುವ ಕಾರಣ ಅಂಕಿ ಅಂಶ ದಾಖಲು ಮಾಡಲು ಆಗುತ್ತಿಲ್ಲ. ಹೀಗಾಗಿ ಸೋಮವಾರದಂದು ಸಿ ಡಿ ಪಿ ಓ ಕಚೇರಿಗೆ ತೆರಳಿ ಅವುಗಳನ್ನು ವಾಪಾಸ್ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

