ಬಳ್ಳಾರಿ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀನದ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿದೆ.
ತಾತ್ಕಾಲಿಕವಾಗಿ ಆಯ್ಕೆಗೊಂಡ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬAಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಮಹಾನಗರಪಾಲಿಕೆ, ನಗರ ಸಭೆ, ಪ.ಪಂಚಾಯತ್, ಪುರಸಭೆ, ಗ್ರಾಮ ಪಂಚಾಯತ್, ಜಿಲ್ಲಾ ಉಪನಿರ್ದೇಶಕರ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಸಲಾಗಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಇದ್ದಲ್ಲಿ ಏ.22 (ರಜೆ ದಿನಗಳನ್ನು ಹೊರತುಪಡಿಸಿ) ರಂದು ಮಧ್ಯಾಹ್ನ 1.30ರೊಳಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಿಗೆ ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.