ಅಂಬೇಡ್ಕರ್ ಬಗ್ಗೆ ಅವಹೇಳನ: ವಿಡಿಯೋ ನೋಡಿ ಹೇಳಿಕೆ ಬದಲಾಯಿಸಿದ ನಟ ಚೇತನ್

ಇತ್ತೀಚೆಗೆ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಯುವಜನೋತ್ಸವದ ವೇಳೆ ಅಭಿನಯಿಸಿದ ಕಿರು ನಾಟಕದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿದ್ದ ವಿಡಿಯೋ ವೈರಲ್ ಆದ ಬಳಿಕ ರಾಜ್ಯದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಈ ಕುರಿತಂತೆ ರಾಜ್ಯದಾದ್ಯಂತ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಲಾಗಿತ್ತು.

ಇದರ ಮಧ್ಯೆ ಟ್ವೀಟ್ ಮಾಡಿದ್ದ ನಟ ಚೇತನ್, ಬಲವಾದ ಪ್ರಜಾಪ್ರಭುತ್ವಕ್ಕಾಗಿ ಎಲ್ಲವನ್ನು ಮತ್ತು ಎಲ್ಲರನ್ನೂ ತಮಾಷೆ ಮಾಡುವ ಹಕ್ಕು ನಮಗಿರಬೇಕು. ನಾವುಗಳು ಮೋದಿಯನ್ನು ಅಪಹಾಸ್ಯ ಮಾಡುವ ಸ್ಟಾಂಡ್ ಅಪ್ ಕಾಮಿಕ್ಸ್ ಮತ್ತು ನಾಟಕಗಳನ್ನು ಹೇಗೆ ಸೆನ್ಸಾರ್ ಮಾಡಬಾರದೋ ರಾಮ, ಮಹಮ್ಮದ್, ಬಸವ, ಅಂಬೇಡ್ಕರ್, ದಲಿತರ ವಿರುದ್ಧ ಹಾಸ್ಯವನ್ನು ಕೂಡ ಅಪರಾಧವೆಂದು ಪರಿಗಣಿಸುವುದು ಪ್ರಜಾಪ್ರಭುತ್ವವಲ್ಲ ಎಂದು ಹೇಳಿದ್ದರು. ಜೊತೆಗೆ ಕಿರು ನಾಟಕದಲ್ಲಿ ಅಭಿನಯಿಸಿದ್ದ ವಿದ್ಯಾರ್ಥಿಗಳನ್ನು ಅಮಾನತು ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ನಟ ಚೇತನ್ ಅವರ ಈ ಟ್ವೀಟ್ ಗೆ ತೀವ್ರ ಖಂಡನೆ ವ್ಯಕ್ತವಾಗಿತ್ತಲ್ಲದೆ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆದ ಈ ಕಿರು ನಾಟಕವನ್ನು ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ಸಮರ್ಥಿಸಿಕೊಳ್ಳುವುದು ಎಷ್ಟು ಸರಿ ಎಂದು ಪ್ರಶ್ನಿಸಲಾಗಿತ್ತು. ಇದೀಗ ನಟ ಚೇತನ್ ಈ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ.

ಮತ್ತೊಂದು ಟ್ವೀಟ್ ಮಾಡಿರುವ ನಟ ಚೇತನ್, ಜೈನ್ ವಿಶ್ವವಿದ್ಯಾಲಯದಲ್ಲಿ ದಲಿತರ ಬಗ್ಗೆ ಮಾಡಿರುವ ಸ್ಕಿಟ್ ಕ್ಲಿಪ್‌ಗಳನ್ನು ಪೂರ್ತಿಯಾಗಿ ನೋಡಿದ ನಂತರ, ನಾನು ನನ್ನ ಹಿಂದಿನ ಪೋಸ್ಟ್ ಅನ್ನು ಹಿಂತೆಗೆದುಕೊಂಡಿದ್ದೇನೆ. ಜಾತೀಯತೆಯಲ್ಲಿ ಬೇರೂರಿರುವ ಶಿಕ್ಷಣ ವ್ಯವಸ್ಥೆಯಲ್ಲಿ ಅಂತಹ ಚಿತ್ರಣಗಳ ಆಳವಾದ ಮಾನಸಿಕ ಪರಿಣಾಮಗಳನ್ನು ಹೊಂದಿವೆ (ಉದಾಹರಣೆಗಳು ರೋಹಿತ್ ವೇಮುಲ ಮತ್ತು ಪಾಯಲ್ ತದ್ವಿ) ಈ ಘಟನೆಗೆ ಜೈನ್ ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ಹೊಣೆ ಮಾಡಬೇಕು. ವಿದ್ಯಾರ್ಥಿಗಳನ್ನು ಅಪರಾಧಿಗಳಾಗಿಸುವುದು ಸರಿಯಾದ ಮಾರ್ಗವೇ ? ನನಗೆ  ಇನ್ನೂ ಅನುಮಾನವಿದೆ ಎಂದಿದ್ದಾರೆ.

 

Image

Image

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read