HomeKarnatakaಅಕ್ರಮ ಕಲ್ಲು ಗಣಿಗಾರಿಕೆ ಪತ್ತೆಗೆ ಡ್ರೋನ್ ಸರ್ವೆಗೆ ಸರ್ಕಾರ ನಿರ್ಧಾರ

ಅಕ್ರಮ ಕಲ್ಲು ಗಣಿಗಾರಿಕೆ ಪತ್ತೆಗೆ ಡ್ರೋನ್ ಸರ್ವೆಗೆ ಸರ್ಕಾರ ನಿರ್ಧಾರ

ಬೆಳಗಾವಿ(ಸುವರ್ಣಸೌಧ): ಅಕ್ರಮ ಕಲ್ಲು ಗಣಿಗಾರಿಕೆ ಪತ್ತೆಗೆ ಗಣಿ ಗುತ್ತಿಗೆ ಪ್ರದೇಶಗಳಲ್ಲಿ ಡ್ರೋನ್ ಸರ್ವೆ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಟಿ.ಎ. ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆ.ಎಸ್.ಆರ್.ಎಸ್.ಎ.ಸಿ. ಸಂಸ್ಥೆಗೆ ಸಮೀಕ್ಷೆ ನಡೆಸಲು ಕಾರ್ಯಾದೇಶ ನೀಡಿದ್ದು, ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಗುತ್ತಿಗೆ ಪಡೆದ ಪ್ರದೇಶಕ್ಕಿಂತ ಹೆಚ್ಚಿನ ಜಾಗ ಒತ್ತುವರಿ ಮಾಡಿಕೊಂಡು ಗುತ್ತಿಗೆದಾರರು ಅಕ್ರಮ ಗಣಿಗಾರಿಕೆ ನಡೆಸುವುದು, ರಾಜಧನ ಪಾವತಿಸದೆ ಉಪಖನಿಜ ಮಾರಾಟ ಮಾಡುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular