ಅಚ್ಚರಿಯಾಗುವಂತಿದೆ ‘ಜಾರಿ ನಿರ್ದೇಶನಾಲಯ’ ದಾಖಲಿಸಿರುವ ಪ್ರಕರಣಗಳ ಸಂಖ್ಯೆ

ಜಾರಿ ನಿರ್ದೇಶನಾಲಯ ಕಳೆದ ಕೆಲವು ವರ್ಷಗಳಲ್ಲಿ ದಾಖಲಿಸಿರುವ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡು ಬಂದಿದ್ದು, 2018-19 ರಿಂದ 2021-22 ರ ಅವಧಿಯಲ್ಲಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡಾ 505 ರಷ್ಟು ಏರಿಕೆಯಾಗಿದೆ. ಕೇಂದ್ರ ಹಣಕಾಸು ಸಚಿವಾಲಯದ ಮೂಲಗಳಿಂದ ಈ ಮಾಹಿತಿ ಬಹಿರಂಗವಾಗಿದೆ.

ರಾಜಕೀಯ ಪಕ್ಷಗಳ ನಾಯಕರು, ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ನಡೆಸಿರುವ ದಾಳಿಯಲ್ಲೂ ಸಹ ಭಾರಿ ಹೆಚ್ಚಳವಾಗಿದ್ದು, ಕಳೆದ ಎಂಟು ವರ್ಷದ ಅವಧಿಯಲ್ಲಿ ಜಾರಿ ನಿರ್ದೇಶನಾಲಯದಿಂದ 2,974 ದಾಳಿಗಳು ನಡೆದಿವೆ ಎಂದು ತಿಳಿದು ಬಂದಿದೆ. ಈ ಮೂಲಕ ಇದರಲ್ಲಿ ಶೇ. 2,555 ರಷ್ಟು ಹೆಚ್ಚಳವಾದಂತಾಗಿದೆ.

2004-14 ರ ಅವಧಿಯಲ್ಲಿ ಜಾರಿ ನಿರ್ದೇಶನಾಲಯ ಕೇವಲ 112 ಶೋಧಗಳನ್ನು ನಡೆಸಿತ್ತು ಎಂದು ಹೇಳಲಾಗಿದ್ದು, ಈ ಮಾಹಿತಿ ಬಹಿರಂಗವಾದ ಬಳಿಕ ಈಗ ಪ್ರತಿಪಕ್ಷಗಳು, ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ತಮ್ಮ ಈ ಹಿಂದಿನ ಆರೋಪಕ್ಕೆ ಇದರಿಂದ ಪುಷ್ಟಿ ಸಿಕ್ಕಂತಾಗಿದೆ ಎಂದು ಹೇಳಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read