HomeAgricultureಅನಧಿಕೃತ ಸಾಗುವಳಿದಾರರಿಗೆ ಇಲ್ಲಿದೆ 'ಗುಡ್ ನ್ಯೂಸ್'

ಅನಧಿಕೃತ ಸಾಗುವಳಿದಾರರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಅನಧಿಕೃತ ಸಾಗುವಳಿದಾರರಿಗೆ ಮತ್ತೊಂದು ಗುಡ್ ನ್ಯೂಸ್ ಇಲ್ಲಿದೆ. ಸಾಗುವಳಿಯನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಲು ಮೇ 31 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಕಂದಾಯ ಸಚಿವ ಆರ್. ಅಶೋಕ್ ಈ ವಿಷಯ ತಿಳಿಸಿದ್ದು, 2005, ಜನವರಿ 1ಕ್ಕಿಂತಲೂ ಪೂರ್ವದಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವವರಿಗೆ ಇದು ಅನ್ವಯವಾಗಲಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಕಲಂ 94ಎ (4)ರ ಅಡಿ ನಮೂನೆ 57ರಲ್ಲಿ ಮೇ 31ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯ ಹರತಾಳು ಹಾಲಪ್ಪ ಅವರ ಪ್ರಶ್ನೆಗೆ ಈ ಉತ್ತರ ನೀಡಿರುವ ಸಚಿವರು, ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮಗೊಳಿಸಲು ಭೂ ಕಂದಾಯ ಕಾಯ್ದೆ 1964ರ ಕಲಂ 94 ಎ, 94 ಬಿ, 94ಎ (4) ರ ಅಡಿ ನಮೂನೆ 50, 53 ರಲ್ಲಿ ಅರ್ಜಿ ಸಲ್ಲಿಸದವರಿಗೆ ನಮೂನೆ 57 ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿ, ಅವಧಿ ವಿಸ್ತರಿಸಲಾಗಿದೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular