HomeCrimeಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯ ಹತ್ಯೆ

ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯ ಹತ್ಯೆ

ಮಹಿಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ವ್ಯಕ್ತಿಯೊಬ್ಬನಿಗೆ ಥಳಿಸಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಬಳಿ ನಡೆದಿದೆ.

ಮುತ್ತಳ್ಳಿ ಗ್ರಾಮದ 30 ವರ್ಷದ ಸೋಮಪ್ಪ ಮೃತಪಟ್ಟವನಾಗಿದ್ದು, ಸುದೀಪ್, ನಾಗರಾಜ್ ಹಾಗೂ ರಮೇಶ್ ಇವರನ್ನು ಥಳಿಸಿ ಬಳಿಕ ಗ್ರಾಮದ ಬಳಿ ಬಿಸಾಡಿ ಹೋಗಿದ್ದರು ಎಂದು ಆರೋಪಿಸಲಾಗಿದೆ.

ಸೋಮಪ್ಪ ತನ್ನದೇ ಗ್ರಾಮದ ಗಂಗಮ್ಮ ಎಂಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಆಕೆ ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ. ಇದನ್ನು ವಿರೋಧಿಸುತ್ತಿದ್ದ ಆಕೆಯ ಪುತ್ರ ಸುದೀಪ್ ತನ್ನ ಸ್ನೇಹಿತರ ಜೊತೆ ಸೇರಿ ಕೃತ್ಯವೆಸಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೀವ್ರವಾಗಿ ಗಾಯಗೊಂಡಿದ್ದ ಸೋಮಪ್ಪನನ್ನು ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿದ್ದರಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ಈಗ ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular