ಅಪಘಾತಕ್ಕೀಡಾದವನನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಅರಗ ಜ್ಞಾನೇಂದ್ರ

ಶಿವಮೊಗ್ಗ: ಅಡ್ಡ ಬಂದ ಹಸುವನ್ನ ತಪ್ಪಿಸಲು ಹೋಗಿ ಬೈಕ್ ಸವಾರನಿಗೆ ಅಪಘಾತಕ್ಕೀಡಾಗಿದ್ದು ಆತನನ್ನ ಗೃಹ ಸಚಿವರ ಬೆಂಗಾವಲು ವಾಹನದಲ್ಲಿ ಶಿವಮೊಗ್ಗದ ಮೆಗ್ಗಾನ್‌ಗೆ ರವಾನಿಸಲಾಗಿದೆ.

ನಿನ್ನೆ ತಾನೇ ಗೃಹ ಸಚಿವರ ಬೆಂಗಾವಲು ವಾಹನ ಚಿಕ್ಕಮಗಳೂರಿನ ಜಿಲ್ಲೆಯಲ್ಲಿ ಅಪಘಾತಪಡಿಸಿ ವ್ಯಕ್ತಿಯೋರ್ವನ ಸಾವಿಗೆ ಕಾರಣವಾಗಿತ್ತು. ಇಂದು ಅಪಘಾತಕ್ಕೀಡಾದ ವ್ಯಕ್ತಿಯನ್ನ ರಕ್ಷಿಸುವಲ್ಲಿ ನೆರವಾಗಿದೆ.

ರಾಷ್ಟ್ರೀಯ ಹೆದ್ದಾರಿ 169 ರ ಶಿವಮೊಗ್ಗ ಮತ್ತು ತೀರ್ಥಹಳ್ಳಿ ನಡುವಿನ ತೂದುರು ಸಮೀಪದ ಜಂಬಳ್ಳಿ ತಿರುವಿನಲ್ಲಿ ಹಸುವೊಂದು ಅಡ್ಡ ಬಂದಿದ್ದರ ಪರಿಣಾಮ ಮಂಡಗದ್ದೆ ಸಮೀಪದ ಸಿಂಗನಬಿದರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಹಳಗ ಗ್ರಾಮದ ಬೈಕ್ ಸವಾರ ಮನೋಜ್ ಹಸುವನ್ನು ತಪ್ಪಿಸಲು ಹೋಗಿ ಅಪಘಾತಕ್ಕಿಡಾಗಿದ್ದಾರೆ.

ಇದನ್ನು ಗಮನಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಜನ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ ಸೊಪ್ಪುಗುಡ್ಡೆ ರಾಘವೇಂದ್ರ ಉಪಚರಿಸಿದ್ದಾರೆ. ನಂತರ ಇದೆ ಮಾರ್ಗದಲ್ಲಿ ಗುಡ್ಡೆಕೊಪ್ಪದಿಂದ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದ್ದ ಗೃಹಸಚಿವ ಆರಗ ಜ್ಞಾನೇಂದ್ರ, ಸೊಪ್ಪುಗುಡ್ಡೆ ರಾಘವೇಂದ್ರ ಅವರ ಜೊತೆ ಸೇರಿ ಬೈಕ್ ಸವಾರನಿಗೆ ಧೈರ್ಯ ತುಂಬಿ ತಕ್ಷಣವೇ ತಮ್ಮ ಎಸ್ಕಾರ್ಟ್ ವಾಹನದಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ಕಳುಹಿಸಿ ಮತ್ತೊಮ್ಮೆ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read