
ಟಿಕೆಟ್ ವಂಚಿತರು ಪಕ್ಷದ ವಿರುದ್ಧ ತಿರುಗಿ ಬಿದ್ದಿದ್ದು, ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡುವುದರ ಜೊತೆಗೆ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ಮುಂದಾಗುತ್ತಿದ್ದಾರೆ.
ಈಗಾಗಲೇ ಲಕ್ಷ್ಮಣ ಸವದಿ, ಆರ್. ಶಂಕರ್ ಮೊದಲಾದವರು ಬಂಡಾಯ ಸಾರಿದ್ದು, ಇದೀಗ ಮತ್ತೊಬ್ಬ ನಾಯಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಸೊಗಡು ಶಿವಣ್ಣ ಬಿಜೆಪಿಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ನೂರಕ್ಕೆ ನೂರು ನಾಳೆ ನಾನು ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ.

