
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ನಮ್ಮ ಕಾಂಗ್ರೆಸ್ ಪಕ್ಷವನ್ನು ಹಾಳು ಮಾಡಿದ್ದಾನೆ. ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಬೀಳಿಸಿದ್ದೇ ನಾನು ಎಂದು ಹೇಳಿಕೊಂಡಿದ್ದರೆಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು.
ಇದು ರಾಜಕಾರಣ. ಅವರು ಏನು ಬೇಕಾದರೂ ಹೇಳಿಕೊಂಡು ತಿರುಗಲಿ. ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ ಡಿ.ಕೆ. ಶಿವಕುಮಾರ್, ಮತದಾರರಿಗೆ 6,000 ರೂಪಾಯಿ ಕೊಡುತ್ತೇವೆಂದು ನಾವು ಹೇಳಿರಲಿಲ್ಲ ಎಂದು ಟಾಂಗ್ ನೀಡಿದರು.

