HomeKarnatakaಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

 

ಬಿರುಗಾಳಿ, ಮಳೆ ಆರ್ಭಟದ ನಡುವೆ ಮಹಿಳೆಯೊಬ್ಬರು ಆಸ್ಪತ್ರೆಗೆ ತಲುಪುವ ಮೊದಲೇ ಆಂಬುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೊಡ್ಡಬಳ್ಳಾಪುರದ ಗೌರಿಬಿದನೂರು ತಾಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದ ರೂಪ ಆಂಬುಲೆನ್ಸ್ ನಲ್ಲೇ ಹೆರಿಗೆಯಾಗಿದ್ದಾರೆ. ಮಹಿಳೆಗೆ ಮುಂಜಾನೆ 4:30ರ ಸುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಮನೆಯವರು ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ.

ಮಳೆಯ ನಡುವೆ ಆಂಬುಲೆನ್ಸ್ ಸ್ಥಳಕ್ಕೆ ಬಂದು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಿದೆ. ಆದರೆ ಆಸ್ಪತ್ರೆಗೆ ತಲುಪುವ ಮೊದಲೇ ದೊಡ್ಡಬಳ್ಳಾಪುರದ ಕಂಟನಕುಂಟೆ ಬಳಿ ಆಂಬುಲೆನ್ಸ್ ನಲ್ಲಿಯೇ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ. ಹೆರಿಗೆ ಬಳಿಕ ತಾಯಿ-ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular