ಆಗುಂಬೆ ಸೂರ್ಯಾಸ್ತದ ದೃಶ್ಯ ಕಣ್ತುಂಬಿಕೊಳ್ಳಿ

ದೇಶದಲ್ಲಿ ಅತಿ ಹೆಚ್ಚು ಮಳೆ ಬೀಳುವ ಸ್ಥಳಗಳಲ್ಲಿ ಒಂದಾದ ಆಗುಂಬೆಯನ್ನು ದಕ್ಷಿಣದ ಚಿರಾಪುಂಜಿ ಎಂದು ಕರೆಯಲಾಗುತ್ತದೆ. ಆಗುಂಬೆ ಮಳೆಯ ಜೊತೆಗೆ, ಸೂರ್ಯಾಸ್ತದ ದೃಶ್ಯಕ್ಕೂ ಹೆಸರುವಾಸಿಯಾದ ಸ್ಥಳವಾಗಿದೆ.

ಇಲ್ಲಿಂದ ಸೂರ್ಯಾಸ್ತದ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಪ್ರವಾಸಿಗರು ಭೇಟಿ ಕೊಡುತ್ತಾರೆ. ಶಿವಮೊಗ್ಗದಿಂದ ಸುಮಾರು 65 ಕಿಲೋ ಮೀಟರ್ ದೂರದಲ್ಲಿರುವ ಆಗುಂಬೆ, ತೀರ್ಥಹಳ್ಳಿ ತಾಲ್ಲೂಕಿನ ಪ್ರಮುಖ ಪ್ರವಾಸಿ ಸ್ಥಳವಾಗಿದೆ. ಪಶ್ಚಿಮಘಟ್ಟದ ಪ್ರಕೃತಿ ಸೌಂದರ್ಯದ ಜೊತೆಗೆ ಆಗುಂಬೆಯ ಸೂರ್ಯಾಸ್ತದ ವೈಭವವನ್ನು ನೋಡಬಹುದಾಗಿದೆ. ತೀರ್ಥಹಳ್ಳಿ, ಶಿವಮೊಗ್ಗದ ಸುತ್ತಮುತ್ತ ಅನೇಕ ಪ್ರವಾಸಿ ತಾಣಗಳಿದ್ದು, ಒಂದು ದಿನದ ಪ್ರವಾಸ ಕೈಗೊಳ್ಳಬಹುದಾಗಿದೆ.

ಆಗುಂಬೆಯಲ್ಲಿ ಕಿರಿದಾದ ತಿರುವು ರಸ್ತೆಗಳಿದ್ದು, ವಾಹನ ಸವಾರರು, ಚಾಲಕರು ಎಚ್ಚರಿಕೆಯಿಂದ ವಾಹನ ಚಲಾಯಿಸುತ್ತಾರೆ. ಎತ್ತರದ ಪ್ರದೇಶದಲ್ಲಿ ನಿಂತು ಕಡಿದಾದ ಬೆಟ್ಟದ ಸಾಲುಗಳನ್ನು ನೋಡುವುದು ಮನಸ್ಸಿಗೆ ಮುದ ನೀಡುತ್ತದೆ. ಶಿವಮೊಗ್ಗ, ಉಡುಪಿಯಿಂದ ಬಸ್ ವ್ಯವಸ್ಥೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read