HomeKarnataka'ಆಮ್ ಆದ್ಮಿ ಪಾರ್ಟಿ' ತೊರೆದು ಬಿಜೆಪಿ ಸೇರ್ಪಡೆಗೆ ಮುಂದಾದ ಭಾಸ್ಕರ್ ರಾವ್

‘ಆಮ್ ಆದ್ಮಿ ಪಾರ್ಟಿ’ ತೊರೆದು ಬಿಜೆಪಿ ಸೇರ್ಪಡೆಗೆ ಮುಂದಾದ ಭಾಸ್ಕರ್ ರಾವ್

ಉನ್ನತ ಹುದ್ದೆಯಿಂದ ಸ್ವಯಂ ನಿವೃತ್ತಿ ಪಡೆದು ಕೆಲ ತಿಂಗಳುಗಳ ಹಿಂದಷ್ಟೇ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸೇರ್ಪಡೆಗೊಂಡಿದ್ದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಈಗ ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ಚುನಾವಣಾ ಉಸ್ತುವಾರಿ ಕೆ. ಅಣ್ಣಾಮಲೈ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆ ಮಂಗಳವಾರದಂದು ಅವರು ಮಾತುಕತೆ ನಡೆಸಿದ್ದು, ಅವರ ಪಕ್ಷ ಸೇರ್ಪಡೆಗೆ ಬಿಜೆಪಿ ಉನ್ನತ ನಾಯಕರಿಂದಲೂ ಗ್ರೀನ್ ಸಿಗ್ನಲ್ ಬಂದಿದೆ ಎನ್ನಲಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿಯಿಂದ ಸ್ಪರ್ಧಿಸಲು ಬಯಸಿದ್ದ ಭಾಸ್ಕರ್ ರಾವ್ ಅವರಿಗೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಬಿಜೆಪಿ ಟಿಕೆಟ್ ನೀಡಲಾಗುತ್ತದಾ ಎಂಬ ಕುತೂಹಲ ಈಗ ರಾಜಕೀಯ ವಲಯದಲ್ಲಿ ಮೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular