ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನಕ್ಕೆ ನೆರವಾಗುತ್ತಾರಾ ಪ್ರಧಾನಿ ಮೋದಿ ? ಕುತೂಹಲ ಮೂಡಿಸಿದ ‘ರಾ’ ಮಾಜಿ ಮುಖ್ಯಸ್ಥರ ಹೇಳಿಕೆ

ನೆರೆ ರಾಷ್ಟ್ರ ಪಾಕಿಸ್ತಾನ ಇನ್ನಿಲ್ಲದಂತೆ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ಭಯೋತ್ಪಾದನೆಗೆ ಬೆಂಬಲ ನೀಡುವ ಮೂಲಕ ಭಾರತ ಸೇರಿದಂತೆ ವಿಶ್ವ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದ ಆ ದೇಶದಲ್ಲಿ ಈಗ ಜನಸಾಮಾನ್ಯರು ಒಂದು ಹೊತ್ತಿನ ಊಟಕ್ಕೂ ಪರಿತಪಿಸುವಂತಾಗಿದೆ.

ಪಾಕಿಸ್ತಾನದ ಸಚಿವರೇ ತಮ್ಮ ದೇಶ ದಿವಾಳಿಯಾಗಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದು, ಇದರಿಂದ ಚೇತರಿಸಿಕೊಳ್ಳಲು ಬಹಳ ಕಾಲ ಬೇಕಾಗುತ್ತದೆ ಎಂದಿದ್ದಾರೆ. ಇದರ ಮಧ್ಯೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಮಾನವೀಯ ನೆಲೆಯಲ್ಲಿ ಪಾಕಿಸ್ತಾನಕ್ಕೆ ನೆರವಾಗುತ್ತಾರಾ ಎಂಬ ಕುತೂಹಲ ಮೂಡಿದೆ.

ಇದಕ್ಕೆ ಕಾರಣವಾಗಿರುವುದು ಗುಪ್ತಚರ ಸಂಸ್ಥೆ ‘ರಾ’ ಮಾಜಿ ಮುಖ್ಯಸ್ಥ ಅಮರಜಿತ್ ಸಿಂಗ್ ಧುಲತ್ ನೀಡಿರುವ ಹೇಳಿಕೆ. ಸುದ್ದಿ ಸಂಸ್ಥೆ ಪಿಟಿಐ ವಿಡಿಯೋಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, ಈ ವರ್ಷದ ಕೊನೆಗೆ ನರೇಂದ್ರ ಮೋದಿಯವರು ಪಾಕಿಸ್ತಾನಕ್ಕೆ ಆರ್ಥಿಕ ಸಹಾಯ ಮಾಡಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ತಮಗೆ ಯಾವುದೇ ಆಂತರಿಕ ಮಾಹಿತಿ ಇಲ್ಲ. ಇದು ನನ್ನ ಊಹೆಯಷ್ಟೇ ಎಂದು ಹೇಳಿರುವ ಅವರು ಪ್ರಸ್ತುತ ಆ ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸಹಾಯ ಹಸ್ತ ಚಾಚಬಹುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read