ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ : ಇಂದೇ ವೇತನ ಬಿಡುಗಡೆ ಭರವಸೆ

ಬೆಂಗಳೂರು : ಆಶಾ ಕಾರ್ಯಕರ್ತರಿಗೆ (ASHA workers) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸಿಹಿಸುದ್ದಿ ನೀಡಿದ್ದು, ಇಂದೇ ಆಶಾ ಕಾರ್ಯಕರ್ತರ ಸಂಬಳದ ಕುರಿತಂತೆ ಅಧಿಕಾರಿಗಳ ಜೊತೆಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯರನ್ನು ಆಶಾ ಕಾರ್ಯಕರ್ತರು ಭೇಟಿಯಾಗಿದ್ದು, ಈ ವೇಳೆ ಕಳೆದ 4 ತಿಂಗಳಿನಿಂದ ನಮಗೆ ಸಂಬಳ ಆಗಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಇಂದು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಆಶಾ ಕಾರ್ಯಕರ್ತರ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.

ಬಾಡಿಗೆದಾರರಿಗೆ ಉಚಿತ ವಿದ್ಯುತ್ ಕುರಿತಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಪಯೋಗಿಸುವ ಬಾಡಿಗೆದಾರರು ಸೇರಿದಂತೆ ಎಲ್ಲರಿಗೂ ಉಚಿತ ವಿದ್ಯುತ್ ನೀಡಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read