
ಆಸ್ತಿ ವಿವರ ಸಲ್ಲಿಕೆಯನ್ನು ಡಿಸೆಂಬರ್ 31ರ ಬದಲಿಗೆ ಮಾರ್ಚ್ 31ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.
ಈ ಕುರಿತಂತೆ ಸುತ್ತೋಲೆ ಹೊರಡಿಸಲಾಗಿದ್ದು, ಸರ್ಕಾರಿ ನೌಕರರು, ಅಧಿಕಾರಿಗಳು ಎಲ್ಲಾ ಮಾಹಿತಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಮೂಲಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

