ಇಂದು ಬಿಜೆಪಿ ಸಂಸ್ಥಾಪನಾ ದಿನ: 10 ಲಕ್ಷಕ್ಕೂ ಅಧಿಕ ಸ್ಥಳಗಳ ಗೋಡೆ ಮೇಲೆ ರಾರಾಜಿಸಲಿದೆ ‘ಏಕ್ ಬಾರ್ ಫಿರ್ ಸೆ ಮೋದಿ ಸರ್ಕಾರ್’ ಘೋಷವಾಕ್ಯ

ಏಪ್ರಿಲ್ 6 ರ ಇಂದು ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಕ್ಷದ ಸದಸ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಅಲ್ಲದೆ ಮುಂದಿನ ಲೋಕಸಭಾ ಚುನಾವಣೆಯಲ್ಲೂ ಪ್ರಧಾನಿಯಾಗಿ ನರೇಂದ್ರ ಮೋದಿ ಅವರನ್ನೇ ಪುನರಾಯ್ಕೆ ಮಾಡುವ ಗೋಡೆ ಬರಹ ಅಭಿಯಾನಕ್ಕೂ ಚಾಲನೆ ನೀಡಲಾಗುತ್ತಿದ್ದು, ದೇಶದ 10.22 ಲಕ್ಷಕ್ಕೂ ಅಧಿಕ ಸ್ಥಳಗಳ ಗೋಡೆಗಳ ಮೇಲೆ ‘ಏಕ್ ಬಾರ್ ಫಿರ್ ಸೆ ಮೋದಿ ಸರ್ಕಾರ್’ ಎಂಬ ಘೋಷ ವಾಕ್ಯವನ್ನು ಪಕ್ಷದ ಕಾರ್ಯಕರ್ತರು ಬರೆಯಲಿದ್ದಾರೆ.

ಗೋಡೆ ಬರಹ ಅಭಿಯಾನಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಇಂದು ಮಧ್ಯಾಹ್ನ 12 ಗಂಟೆಗೆ ಚಾಲನೆ ನೀಡಲಿದ್ದು, ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ದೇಶದ ಸುಮಾರು 10 ಲಕ್ಷ ಕಡೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read