HomeEntertainmentಇಂದು ಬಿಡುಗಡೆಯಾಗಲಿದೆ ʼಕ್ಷೇತ್ರಪತಿʼ ಚಿತ್ರದ ಮೊದಲ ಹಾಡು

ಇಂದು ಬಿಡುಗಡೆಯಾಗಲಿದೆ ʼಕ್ಷೇತ್ರಪತಿʼ ಚಿತ್ರದ ಮೊದಲ ಹಾಡು

Naveen Shankar

ಇದೇ ತಿಂಗಳು ಆಗಸ್ಟ್ 18 ರಂದು ರಾಜ್ಯದ್ಯಂತ ತೆರೆ ಕಾಣಲಿರುವ ಕ್ಷೇತ್ರಪತಿ ಚಿತ್ರದ ಮೊದಲ ಹಾಡು ಆನಂದ್ ಆಡಿಯೋ youtube  ಚಾನೆಲ್ ನಲ್ಲಿ ಇಂದು ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದೆ.

‘ಪಲ್ಲಕ್ಕಿ’ ಎಂಬ ಜಾನಪದ ಸೊಬಗಿನ ಈ ಹಾಡಿಗೆ ಭಾರತದ ಖ್ಯಾತ ಸಂಗೀತ ನಿರ್ದೇಶಕ ರವಿ  ಬಸ್ರೂರ್ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶ್ರೀಕಾಂತ್ ಕಟಗಿ ನಿರ್ದೇಶನದ ಈ ಚಿತ್ರದಲ್ಲಿ ನವೀನ್ ಶಂಕರ್ ಹಾಗೂ ಅರ್ಚನಾ ಜೋಯಿಸ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣ ಮಾಡಲಾಗಿದೆ. ಕೃಷ್ಣ ಹೆಬ್ಬಾಳೆ, ಅಚ್ಯುತ್ ಕುಮಾರ್, ನಾಟ್ಯ ರಂಗ, ರಾಹುಲ್ ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದು, ಅರ್ಚನಾ ಜೋಯಿಸ್ ಪತ್ರಕರ್ತೆಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.

 

 

For Latest News Updates, Join Our Whatsapp Community🚩
RELATED ARTICLES

Most Popular