HomeEntertainmentಇಂದು ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ; ಕುಟುಂಬ ಸದಸ್ಯರೊಂದಿಗೆ ದುಬೈನಲ್ಲಿ ಆಚರಣೆ

ಇಂದು ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ; ಕುಟುಂಬ ಸದಸ್ಯರೊಂದಿಗೆ ದುಬೈನಲ್ಲಿ ಆಚರಣೆ

ರಾಕಿಂಗ್ ಸ್ಟಾರ್ ಯಶ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಈ ಸಂಭ್ರಮವನ್ನು ಕುಟುಂಬ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ದುಬೈನಲ್ಲಿ ಆಚರಿಸಿಕೊಳ್ಳಲಿದ್ದಾರೆ. ಹೀಗಾಗಿ ರಾಕಿಂಗ್ ಸ್ಟಾರ್ ಯಶ್, ಪತ್ನಿ ರಾಧಿಕಾ ಪಂಡಿತ್ ಸೇರಿದಂತೆ ಕುಟುಂಬಸ್ಥರು ದುಬೈಗೆ ತೆರಳಿದ್ದಾರೆ ಎನ್ನಲಾಗಿದೆ.

ಈ ಬಾರಿಯ ಹುಟ್ಟುಹಬ್ಬದ ಸಂದರ್ಭದಲ್ಲಿ ತಾವು ಅಭಿಮಾನಿಗಳ ಜೊತೆ ಇರಲು ಸಾಧ್ಯವಾಗುತ್ತಿಲ್ಲ ಎಂಬ ವಿಷಯವನ್ನು ರಾಕಿಂಗ್ ಸ್ಟಾರ್ ಯಶ್ ಇತ್ತೀಚೆಗಷ್ಟೇ ಹಂಚಿಕೊಂಡಿದ್ದು, ಹೀಗಾಗಿ ತಮ್ಮ ನೆಚ್ಚಿನ ನಟನನ್ನು ಖುದ್ದಾಗಿ ಭೇಟಿ ಮಾಡಿ ಶುಭ ಕೋರಬೇಕೆಂಬ ಇರಾದೆ ಹೊಂದಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ.

ಯಶ್ ಅವರ ಹುಟ್ಟುಹಬ್ಬದ ದಿನವೇ ಅದ್ದೂರಿ ಚಿತ್ರವೊಂದರ ನಿರ್ಮಾಣ ಕುರಿತು ಘೋಷಣೆಯಾಗುವ ನಿರೀಕ್ಷೆಯಿದ್ದು, ಹೀಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭ ಕೋರಿ ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular