HomeKarnatakaಇಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಸಿಎಂ ಬೊಮ್ಮಾಯಿ ಮಾಹಿತಿ

ಇಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಸಿಎಂ ಬೊಮ್ಮಾಯಿ ಮಾಹಿತಿ

ನವದೆಹಲಿ: ವಿಧಾನಸಭಾ ಚುನವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕಳೆದ ಮೂರು ದಿನಗಳಿಂದ ಮುಂದೂಡಿಕೆಯಾಗುತ್ತಲೇ ಇದೆ. ಇಂದು ಬಿಜೆಪಿ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಇಂದು ಬಿಜೆಪಿ ಪಟ್ಟಿ ನಿರೀಕ್ಷೆ ಮಾಡಬಹುದು ಎಂದು ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅರುಣಾಚಲ ಪ್ರದೇಶ ಪ್ರವಾಸದಲ್ಲಿದ್ದು, ಅವರು ದೆಹಲಿಗೆ ಹಿಂದುರುಗಿದ ಬಳಿಕ ಬಿಜೆಪಿ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಇಂದು ಸಂಜೆ 4 ಗಂಟೆಗೆ ಅಮಿತ್ ಶಾ ದೆಹಲಿಗೆ ಆಗಮಿಸುತ್ತಿದ್ದಾರೆ. ದೆಹಲಿಗೆ ಆಗಮಿಸಿದ ಬಳಿಕ ರಾಜ್ಯ ನಾಯಕರ ಜೊತೆ ಶಾ ಸಭೆ ನಡೆಸಲಿದ್ದು, ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular