ಇತಿಹಾಸ ಪ್ರಸಿದ್ಧ ಸಾಗರ ಮಾರಿಕಾಂಬ ಜಾತ್ರೆ ಇಂದಿನಿಂದ ಆರಂಭ

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಇಂದಿನಿಂದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ಜಾತ್ರೆ ಆರಂಭವಾಗಿದ್ದು, ಫೆಬ್ರವರಿ 15ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿವೆ.

ಎಂಟು ದಿನಗಳ ಕಾಲ ಸಾರ್ವಜನಿಕರಿಗೆ ಅಮ್ಮನವರ ದರ್ಶನಕ್ಕೆ ಅವಕಾಶವಿದ್ದು, ಫೆಬ್ರವರಿ 8ರಂದು ಸಂಜೆ 7 ಗಂಟೆಗೆ ಗಾಂಧಿ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಟಿ.ಎಸ್. ನಾಗಾಭರಣ ಆಗಮಿಸಲಿದ್ದಾರೆ.

ಪ್ರತಿದಿನವೂ ಸಂಜೆ 5:00 ಗಂಟೆಗೆ ಮಾರಿಕಾಂಬ ವೇದಿಕೆಯಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಫೆಬ್ರವರಿ 15ರಂದು ಸಮಾರೋಪ ಸಮಾರಂಭ ನಡೆಯಲಿದೆ. ತಮ್ಮ ಊರಿನ ಜಾತ್ರೆಯಲ್ಲಿ ಪಾಲ್ಗೊಳ್ಳಲು ವಿವಿಧ ಪ್ರದೇಶಗಳಲ್ಲಿ ನೆಲೆಸಿರುವವರು ಸಡಗರ ಸಂಭ್ರಮದಿಂದ ಆಗಮಿಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read